ADVERTISEMENT

ಶಿರಾ: ಚಿನ್ನ ಗೆದ್ದ ಬಾಲಕಿಗೆ ಹುಟ್ಟೂರಲ್ಲಿ ಸನ್ಮಾನ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 5:23 IST
Last Updated 31 ಜನವರಿ 2026, 5:23 IST
ಕರಾಟೆಯಲ್ಲಿ ಚಿನ್ನದ ಪದಕ ಪಡೆದ ಎಚ್.ಆರ್.ಜಾನವಿ ಅವರನ್ನು ಹೇರೂರು ಗ್ರಾಮದಲ್ಲಿ ಸತ್ಕರಿಸಲಾಯಿತು
ಕರಾಟೆಯಲ್ಲಿ ಚಿನ್ನದ ಪದಕ ಪಡೆದ ಎಚ್.ಆರ್.ಜಾನವಿ ಅವರನ್ನು ಹೇರೂರು ಗ್ರಾಮದಲ್ಲಿ ಸತ್ಕರಿಸಲಾಯಿತು   

ಶಿರಾ: ನೇಪಾಳದ ಕಠ್ಮಂಡುನಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಪಂದ್ಯದಲ್ಲಿ ಚಿನ್ನದ ಪದಕ ಪಡೆದ ಎಚ್.ಆರ್. ಜಾನವಿ ಅವರನ್ನು ಸ‌ತ್ಕರಿಸಲಾಯಿತು.

ಜಾನವಿ ಅಂತರರಾಷ್ಟ್ರೀಯ ಕರಾಟೆ ಪಂದ್ಯದಲ್ಲಿ ಬಾಲಕಿಯರ 45 ಕೆ.ಜಿ ವಿಭಾಗದಲ್ಲಿ ದೇಶವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ತಾಲ್ಲೂಕಿನ ಹೇರೂರು ಗ್ರಾಮದ ರೈತ ಎಚ್.ಟಿ.ರಂಗನಾಥ್ ಮತ್ತು ಲಕ್ಷ್ಮಿ ದಂಪತಿಗಳ ಪುತ್ರಿ ಎಚ್.ಆರ್.ಜಾನವಿ ಅವರು ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಶಾರದಾ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಾರೆ.

ADVERTISEMENT

ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಹೇರೂರು ಲಕ್ಷ್ಮಿರಾಜು, ಮಾಜಿ ಅಧ್ಯಕ್ಷ ಎಚ್.ಪಿ.ಶಶಿಧರ್, ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್.ಶಶಿಧರ ಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚಿದಾನಂದ, ನಿರ್ದೇಶಕ ಪದ್ಮರಾಜು, ಹುಣಸೆಹಳ್ಳಿ ಗ್ರಾ.ಪಂ ಅಧ್ಯಕ್ಷೆ ರೇಖಾ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಹನುಮಂತ ರಾಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.