ADVERTISEMENT

ಶಿರಾ | ಭದ್ರಾ ಮೇಲ್ದಂಡೆ: ಅನುದಾನಕ್ಕೆ ಸಿಎಂಗೆ ಪ್ರಸ್ತಾವನೆ

ಶಾಸಕ ಟಿ.ಬಿ‌.ಜಯಚಂದ್ರ ಭರವಸೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:22 IST
Last Updated 27 ಫೆಬ್ರುವರಿ 2026, 7:22 IST
ಶಿರಾ ತಾಲ್ಲೂಕಿನ ನೂತನ ನಾಡಕಚೇರಿ ಉದ್ಘಾಟನೆ, ವಿವಿಧ ರಸ್ತೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಟಿ.ಬಿ‌.ಜಯಚಂದ್ರ ಶಂಕುಸ್ಥಾಪನೆ ನೆರವೇರಿಸಿದರು
ಶಿರಾ ತಾಲ್ಲೂಕಿನ ನೂತನ ನಾಡಕಚೇರಿ ಉದ್ಘಾಟನೆ, ವಿವಿಧ ರಸ್ತೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಟಿ.ಬಿ‌.ಜಯಚಂದ್ರ ಶಂಕುಸ್ಥಾಪನೆ ನೆರವೇರಿಸಿದರು   

ಶಿರಾ: ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿಗೆ ₹4 ಸಾವಿರ ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಟಿ.ಬಿ‌.ಜಯಚಂದ್ರ ಹೇಳಿದರು.

ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯಲ್ಲಿ ನೂತನ ನಾಡಕಚೇರಿ ಉದ್ಘಾಟನೆ, ವಿವಿಧ ರಸ್ತೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಅನುದಾನ ನೀಡಬೇಕಿತ್ತು. ಅದರೆ ಇದುವರೆಗೂ ನೀಡದ ಕಾರಣ ಕಾಮಗಾರಿ ವಿಳಂಬವಾಗಿದೆ. ರಾಜ್ಯ ಸರ್ಕಾರದಿಂದ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಈ ಯೋಜನೆಯಿಂದ ಶಿರಾ ತಾಲ್ಲೂಕಿನ 85 ಕೆರೆಗಳಿಗೆ ನೀರು ಕೊಡುವ ಸಂಕಲ್ಪ ಮಾಡಲಾಗಿದೆ ಎಂದರು‌.

ADVERTISEMENT

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ತಹಶೀಲ್ದಾರ್ ಆನಂದ ಕುಮಾರ್, ತಾ.ಪಂ ಇಒ ಆರ್.ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುಧಾಕರ್, ಅಭಿಷೇಕ್, ಸುರೇಶ್ ಬಾಬು,  ಬಾಲೇನಹಳ್ಳಿ ಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.