ADVERTISEMENT

ಶಿರಾ | ಮಾರನಗೆರೆ ಸಮೀಪ ಅಪಘಾತ: 15 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 6:53 IST
Last Updated 2 ಫೆಬ್ರುವರಿ 2026, 6:53 IST
   

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ಮಾರನಗೆರೆ ಸಮೀಪ ಭಾನುವಾರ ಬೆಳಿಗ್ಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 15 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿವಿಧ ಬಡಾವಣೆಯಲ್ಲಿ ವಾಸವಾಗಿರುವ ಸಂಬಂಧಿಕರು ಮತ್ತು ಸ್ನೇಹಿತರು ಸಿಗಂಧೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದೆ.

ಮಾರನಗೆರೆ ಸಮೀಪ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿರಿಯೂರು ಕಡೆಯಿಂದ ಅತಿವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಾಗ ಬಸ್‌ನಲ್ಲಿದ್ದ ಭವಾನಿ, ಶೀಥಲ್, ರತ್ನ, ಜಗದಾಂಬ, ಮಮತ, ಲೀಲಾವತಿ, ಲಲಿತ, ಪದ್ಮ, ದಾಕ್ಷಾಯಿಣಿ, ಸುಧಾ, ರಾಧ, ಭಾಗ್ಯ, ಮೋಹನ, ಸುಚಿತ್ರ ಹಾಗೂ ಬಸ್ ಚಾಲಕ ಮಾರುತಿ ಗಾಯಗೊಂಡಿದ್ದಾರೆ.

ADVERTISEMENT

ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.