ADVERTISEMENT

ಸುವರ್ಣಸೌಧದ ಎದುರು ಕೊಳೆಗೇರಿ ನಿವಾಸಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2018, 14:06 IST
Last Updated 17 ಡಿಸೆಂಬರ್ 2018, 14:06 IST

ತುಮಕೂರು: ರಾಜ್ಯದ ಕೊಳೆಗೇರಿ ನಿವಾಸಿಗಳ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಮೀಸಲಿಡುವುದು ಹಾಗೂ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಕಾಯ್ದೆ 2018 ಮತ್ತು ವಸತಿ ಹಕ್ಕು ಕಾಯ್ದೆ ಜಾರಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಮುಂದೆ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಡಿ.19ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಣಾಳಿಕೆಯಲ್ಲಿ ಕೊಳೆಗೇರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡುವುದಾಗಿ ಭರವಸೆ ನೀಡಿದ್ದವು. ಕೊಳೆಗೇರಿ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್, 15 ವರ್ಷ ಪೂರೈಸಿದ ಕೊಳಚೆ ಪ್ರದೇಶದ ನಿವಾಸಿಗಳಿಗೆ ಭೂ ಒಡೆತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸ್ಲಂ ಜನಾಂದೋಲನಾ-ಕರ್ನಾಟಕ ಸಂಘಟನೆ ಅಧ್ಯಕ್ಷ ಎ.ನರಸಿಂಹಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT