ತುಮಕೂರು: ‘ಗಾಂಧಿನಗರದ ವಿವಿಧ ರಸ್ತೆಗಳ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಫುಟ್‌ಪಾತ್, ಮನೆಗಳಿಗೆ ರೋಪ್ ನಿರ್ಮಿಸುವ ಕಾರ್ಯ ಚಾಲ್ತಿಯಲ್ಲಿದೆ. ಮುಂದಿನ 15 ದಿನದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಪಾಲಿಕೆಯ 15ನೇ ವಾರ್ಡ್ ಸದಸ್ಯೆ ಗಿರಿಜಾ ಧನಿಯಾಕುಮಾರ್ ತಿಳಿಸಿದರು.
ನಗರದ ಗಾಂಧಿನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಕಾಮಗಾರಿ ವೀಕ್ಷಿಸಿದ ನಂತರ ಅವರು ಮಾತನಾಡಿದರು.
ಕಳೆದ ಒಂದೂವರೆ ವರ್ಷದಿಂದ ಸಹಕರಿಸಿದ ಬಡಾವಣೆಯ ನಾಗರಿಕರು, ಶಾಸಕ ಜ್ಯೋತಿ ಗಣೇಶ್, ಸಂಸದ ಜಿ.ಎಸ್. ಬಸವರಾಜು ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಗಾಂಧಿನಗರದ 9 ರಸ್ತೆಗಳ ಜೊತೆಗೆ ಹೊಸದಾಗಿ ನಾಗರಿಕರ ಮತ್ತು ಜನಪ್ರತಿನಿಧಿಗಳ ಆಗ್ರಹದ ಮೇರೆಗೆ 5 ರಸ್ತೆಗಳನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಹೆಚ್ಚುವರಿಯಾಗಿ ಸೇರಿಸಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.
ಒಂದು ಬಾರಿ ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಯಾವ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶವಿಲ್ಲ. ಅಗತ್ಯವಿದ್ದರೆ ಫುಟ್‌ಪಾತ್‌ನಲ್ಲಿ ಇದಕ್ಕಾಗಿ ಜಾಗ ನೀಡಿದ್ದು, ಅಲ್ಲಿ ಕೆಲಸ ಮಾಡಿಕೊಳ್ಳಬಹುದು. ಈಗಾಗಲೇ 24*7 ಕುಡಿಯುವ ನೀರು, ಗ್ಯಾಸ್ ಪೈಪ್‌ಲೈನ್ ಹಾಗೂ ವಿದ್ಯುತ್ ಕಾಮಗಾರಿ ಪೂರ್ಣಗೊಂಡಿದೆ ಎಂದು ವಿವರಿಸಿದರು.
ಆರ್.ಎಂ.ಎನ್. ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ಚಲ್ಲದೊರೈ ಕುಮಾರ್, ‘ಚಿಕ್ಕಪೇಟೆ, ಗಾಂಧಿನಗರ, ಎಂ.ಜಿ. ರಸ್ತೆಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ರಸ್ತೆಯ ಮಧ್ಯದಲ್ಲಿ ಡಕ್ಕಿಂಗ್ ನಿರ್ಮಿಸುತ್ತಿರುವ ಬಗ್ಗೆ ಭವಿಷ್ಯದಲ್ಲಿ ತೊಂದರೆಯಾಗಬಹುದು ಎಂದು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ದೂರಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಬಡಾವಣೆಯ ನಾಗರಿಕ ಎಲ್.ಐ.ಸಿ ಮಹೇಶ್, ಇಇ ಚಂದನವೀರಯ್ಯ, ಮ್ಯಾನೇಜರ್ ಓಂಪ್ರಕಾಶ್ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.