ADVERTISEMENT

ಯಡಿಯೂರಪ್ಪ ಆಡಳಿತದಲ್ಲಿ ಸಾಮಾಜಿಕ ನ್ಯಾಯ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2019, 9:45 IST
Last Updated 23 ಆಗಸ್ಟ್ 2019, 9:45 IST

ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಮಾಜಿಕ ನ್ಯಾಯದ ಪರವಾಗಿರುವವರು. 12ನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ನ್ಯಾಯ ಪ್ರತಿಪಾದಿಸಿದರು. ಯಡಿಯೂರಪ್ಪ ಅವರು ಆಡಳಿತದಲ್ಲಿ ಅದನ್ನು ಅನುಸರಿಸುತ್ತಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಆಶಯ ಈಡೇರಿದೆ. ಅವರು ಮುಖ್ಯಮಂತ್ರಿ ಆಗುತ್ತಿದ್ದಂತೆಯೇ ರಾಜ್ಯದಲ್ಲಿ ಮಳೆ ಬಂತು. ಬರಕ್ಕೆ ಸಿಲುಕಿದ್ದ ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾದವು. 2023ರಲ್ಲೂ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು. ಅವರೇ ನಮ್ಮ ನಾಯಕರು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.