ADVERTISEMENT

ತುಮಕೂರು ಲೋಕಸಭಾ ಕ್ಷೇತ್ರ: ಸೋಮಣ್ಣ ಸೇರಿ ಇಬ್ಬರು ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 4:57 IST
Last Updated 2 ಏಪ್ರಿಲ್ 2024, 4:57 IST
<div class="paragraphs"><p> ವಿ. ಸೋಮಣ್ಣ</p></div>

ವಿ. ಸೋಮಣ್ಣ

   

ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಸೇರಿದಂತೆ ಇಬ್ಬರು ಸೋಮವಾರ ನಾಮಪತ್ರ ಸಲ್ಲಿಸಿದರು.

ಶಾಸಕರಾದ ಬಿ.ಸುರೇಶ್‌ಗೌಡ, ಸಿ.ಬಿ.ಸುರೇಶ್‌ಬಾಬು, ಮುಖಂಡರಾದ ಪಿ.ಆರ್‌.ಸುಧಾಕರ್‌ಲಾಲ್‌, ಅನಿಲ್‌ಕುಮಾರ್‌ ಅವರೊಂದಿಗೆ ಬಂದು ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಬುಧವಾರ ಬೃಹತ್ ಮೆರವಣಿಗೆ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ಪಕ್ಷೇತರ ಅಭ್ಯರ್ಥಿಯಾಗಿ ತುರುವೇಕೆರೆ ತಾಲ್ಲೂಕಿನ ಕಲ್ಕೆರೆ ಗ್ರಾಮದ ಕಪನಿಗೌಡ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.