ADVERTISEMENT

ಕೊರಟಗೆರೆ | ಗ್ರಾಮೀಣಾಭಿವೃದ್ಧಿಗೆ ವಿಶೇಷ ಅನುದಾನ: ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 5:02 IST
Last Updated 21 ಜನವರಿ 2026, 5:02 IST
ಕೊರಟಗೆರೆ ತಾಲ್ಲೂಕಿನ ಬೊಮ್ಮಲದೇವಿಪುರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಜಿ.ಪರಮೇಶ್ವರ ಭೂಮಿ ಪೂಜೆ ನರವೇರಿಸಿದರು  
ಕೊರಟಗೆರೆ ತಾಲ್ಲೂಕಿನ ಬೊಮ್ಮಲದೇವಿಪುರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಜಿ.ಪರಮೇಶ್ವರ ಭೂಮಿ ಪೂಜೆ ನರವೇರಿಸಿದರು     

ಕೊರಟಗೆರೆ: ತಾಲ್ಲೂಕಿನ ಗ್ರಾಮೀಣ ಅಭಿವೃದ್ಧಿ ಮತ್ತು ಮೂಲ ಸೌಕರ್ಯಗಳಿಗಾಗಿ ₹50 ಕೋಟಿ ಮುಖ್ಯಮಂತ್ರಿ ವಿಶೇಷ ಅನುದಾನ ಬಳಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ಶನಿವಾರ ಹೊಳವನಹಳ್ಳಿ ಹೋಬಳಿ ಶಾಂತಲಿಂಗಯ್ಯನಪಾಳ್ಯ ರಸ್ತೆ ಉದ್ಘಾಟನೆ ಮತ್ತು ಬೊಮ್ಮಲದೇವಿಪುರ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ₹1ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದರು.

ತಾಲ್ಲೂಕಿನ ಬಹುದಿನದ ಬೇಡಿಕೆಯಾಗಿದ್ದ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ನಿರ್ಮಾಣಕ್ಕೆ ಈಗಾಗಲೇ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ₹32ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ತೋವಿನಕೆರೆ ಹೋಬಳಿ ಕೇಂದ್ರದಲ್ಲಿ ₹36 ಕೋಟಿ ವೆಚ್ಚದ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕೋಳಾಲ ಆಸ್ಪತ್ರೆಯನ್ನು ಮುಂದಿನ ದಿನಗಳಲ್ಲಿ ಮೇಲ್ದರ್ಜೆಗೆ ತಂದು ಅಭಿವೃದ್ಧಿಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಶೇಷ ಅನುದಾನ ತಂದು ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ADVERTISEMENT

ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು 'ಪುರಸಭೆ'ಗೆ ಮೇಲ್ದರ್ಜೆಗೆ ಏರಿಸಲಾಗಿದ್ದು, ಪಟ್ಟಣದ ಬೆಳವಣಿಗೆಗೆ ಸುತ್ತಮುತ್ತಲಿನ ಪ್ರದೇಶವನ್ನು ಸೇರಿಸಿಕೊಳ್ಳಲಾಗಿದೆ. ಪುರಸಭೆಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಯೋಗ್ಯ ನಿವೇಶನಗಳು ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಬಿ.ಡಿ.ಡಿಪುರ ಗ್ರಾ.ಪಂ.ಅಧ್ಯಕ್ಷ ಈಶ್ವರ್, ಕ್ಯಾಮೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಕೆ.ಮಂಜುನಾಥ್, ಇ.ಒ ಅಪೂರ್ವ, ಹಾಗೂ ಮುಖಂಡರಾದ ಎಲ್.ರಾಜಣ್ಣ, ಎಚ್.ಕೆ.ಮಹಾಲಿಂಗಪ್ಪ, ಕವಿತ, ಕೆ.ಆರ್.ಒಬಳರಾಜು, ಸುರೇಶ್, ನರಸರಾಜು, ವೆಂಕಟಾಚಲಯ್ಯ, ಮಂಜುನಾಥ್, ಸಿ.ರಾಮಯ್ಯ, ದೇವರಾಜು, ಜಯರಾಮು, ರವಿಕುಮಾರ್, ಹನುಮಂತರಾಜು ಇತರರು ಇದ್ದರು.

ಕೊರಟಗೆರೆ: ಕ್ಷೇತ್ರದ ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ರೂ. 50 ಕೋಟಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಳಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಶಾಂತಲಿಂಗಯ್ಯನಪಾಳ್ಯ ರಸ್ತೆ ಉದ್ಘಾಟನೆ ಹಾಗೂ ಬೊಮ್ಮಲದೇವಿಪುರ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ರೂ. 1 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ತಾಲ್ಲೂಕಿನ ಬಹುದಿಗಳ ಬೇಡಿಕೆಯಾಗಿದ್ದ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ನಿರ್ಮಾಣಕ್ಕೆ ಈಗಾಗಲೇ ಅಗತ್ಯ ಕ್ರಮ ವಹಿಸಲಾಗಿದೆ. ಅದರ ಜೊತೆಯಲ್ಲಿ ರೂ. 32 ಕೋಟಿ ವೆಚ್ಚದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ, ತೋವಿನಕೆರೆ ಹೋಬಳಿ ಕೆಂದ್ರದಲ್ಲಿ ರೂ. 36 ಕೋಟಿ ವೆಚ್ಚದ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಕೋಳಾಲ ಆಸ್ಪತ್ರೆಯನ್ನು ಮುಂದಿನ ದಿನಗಳಲ್ಲಿ ಮೇಲ್ದರ್ಜೆಗೆ ತಂದು ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನದಲ್ಲಿ ಮತ್ತೆ ವಿಶೇಷ ಅನುದಾನ ತಂದು ಇನನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು `ಪುರಸಭೆ'ಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಪಟ್ಟಣದ ಬೆಳವಣಿಗೆಗೆ ಸುತ್ತಮುತ್ತಲ ಒಳಪಡಿಲಾಗಿದೆ. ಪುರಸಭೆಗೆ ಹೆಚ್ಚಿನ ಅನುಧಾನ ತಮದು ಅಭಿವೃದ್ಧಿಗೆ ಶ್ರಮಿಸಲಾಗುವುದು. ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸ ಸ್ಥಳಕ್ಕೆ ಅನುಕೂಲಕರವಾಗುವಂತೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಬಿ.ಡಿ.ಡಿಪುರ ಗ್ರಾ.ಪಂ.ಅಧ್ಯಕ್ಷ ಈಶ್ವರ್, ಕ್ಯಾಮೇನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಕೆ.ಮಂಜುನಾಥ್, ಇ.ಓ ಅಪೂರ್ವ, ಮುಖಂಡರಾದ ಎಲ್. ರಾಜಣ್ಣ, ಎಚ್.ಕೆ.ಮಹಾಲಿಂಗಪ್ಪ, ಕವಿತ, ಕೆ.ಆರ್.ಓಬಳರಾಜು, ಸುರೇಶ್, ನರಸರಾಜು, ವೆಂಕಟಾಚಲಯ್ಯ, ಮಂಜುನಾಥ್, ಸಿ.ರಾಮಯ್ಯ, ದೇವರಾಜು, ಜಯರಾಮು, ರವಿಕುಮಾರ್, ಹನುಮಂತರಾಜು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.