ADVERTISEMENT

ಶ್ರಾವಣ ಮಾಸದ ಕಡೆ ಶನಿವಾರ: ದೇವಸ್ಥಾನಗಳಲ್ಲಿ ಎಳ್ಳುಬತ್ತಿ ಸೇವೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 14:38 IST
Last Updated 31 ಆಗಸ್ಟ್ 2024, 14:38 IST
ಶ್ರಾವಣ ಶನಿವಾರದ ಅಂಗವಾಗಿ ಪಟ್ಟಣದ ಶನಿ ಮಹಾತ್ಮ ದೇವಾಲಯದಲ್ಲಿ ವಿಶೇಷ ಅಲಂಕರಿಸಲಾಗಿತ್ತು
ಶ್ರಾವಣ ಶನಿವಾರದ ಅಂಗವಾಗಿ ಪಟ್ಟಣದ ಶನಿ ಮಹಾತ್ಮ ದೇವಾಲಯದಲ್ಲಿ ವಿಶೇಷ ಅಲಂಕರಿಸಲಾಗಿತ್ತು    

ಗುಬ್ಬಿ: ಶ್ರಾವಣ ಮಾಸದ ಕಡೆ ಶನಿವಾರದ ಅಂಗವಾಗಿ ತಾಲ್ಲೂಕಿನ ಶನಿಮಹಾತ್ಮ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ದೇವಾಲಯದಲ್ಲಿ ಅಭಿಷೇಕ ಹಾಗೂ ಅರ್ಚನೆಗಳನ್ನು ಏರ್ಪಡಿಸಲಾಗಿತ್ತು. ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಸಹಸ್ರಾರು ಭಕ್ತರು ದೇವಾಲಯಗಳಿಗೆ ಭೇಟಿ ನೀತಿ ಎಳ್ಳುಬತ್ತಿ ಸೇವೆ ನಂತರ ಪೂಜೆ ಸಲ್ಲಿಸಿದರು.

ದೇವಾಲಯಕ್ಕೆ ಭೇಟಿ ನೀಡಿದ ಭಕ್ತರಿಗೆ ತೀರ್ಥ, ಪ್ರಸಾದದ ಜೊತೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ADVERTISEMENT

ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.