ADVERTISEMENT

ಸಮಾಜ ಸೇವೆಯಲ್ಲಿ ವಿಶ್ರಾಂತಿ ಜೀವನ ಕಳೆಯಿರಿ: ನೂರುನ್ನಿಸಾ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 3:06 IST
Last Updated 2 ಅಕ್ಟೋಬರ್ 2024, 3:06 IST
<div class="paragraphs"><p>ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. </p></div>

ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

   

ತುಮಕೂರು: ಹಿರಿಯ ನಾಗರಿಕರು ತಮ್ಮ ವಿಶ್ರಾಂತ ಜೀವನದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನಿಸಾ ಇಲ್ಲಿ ಮಂಗಳವಾರ ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಹಿರಿಯ ನಾಗರಿಕರು ಶ್ರಮದಿಂದ ದುಡಿದ ಸ್ಥಿರಾಸ್ತಿ, ಚರಾಸ್ತಿಗಳನ್ನು ತಾವೇ ಅನುಭವಿಸುವ ಮೂಲಕ ಸಂತಸದಿಂದ ಬದುಕಬಹುದು. ಜೀವಿತಾವಧಿಯ ಕೊನೆಯ ಕ್ಷಣದವರೆಗೂ ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ನಾವೆಲ್ಲರೂ ಕಲ್ಪಿಸಿಕೊಡಬೇಕು ಎಂದು ಹೇಳಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ, ‘ಮಕ್ಕಳಿಂದ ತೊಂದರೆ, ಸಮಸ್ಯೆಗಳು ಉಂಟಾದಲ್ಲಿ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ’ ಎಂದು ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ರಮೇಶ್, ಹಿರಿಯ ನಾಗರಿಕರ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನ್ ಕುಮಾರ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಇತರರು ಉಪಸ್ಥಿತರಿದ್ದರು.

ಊರುಕೆರೆಯ ಭೋವಿಪಾಳ್ಯದ ಶತಾಯುಷಿ ಚನ್ನಬಸವಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

ತುಮಕೂರಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ನ್ಯಾಯಾಧೀಶರಾದ ನೂರುನ್ನಿಸಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನ್ ಕುಮಾರ್, ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಇತರರು ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.