ADVERTISEMENT

ವಕೀಲರ ಬೆಂಬಲ ಕೋರಿದ ಎಸ್‌ಪಿಎಂ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 6:31 IST
Last Updated 4 ಏಪ್ರಿಲ್ 2024, 6:31 IST

ತುರುವೇಕೆರೆ: ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವಂತೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ತಾಲ್ಲೂಕಿನ ವಕೀಲರಲ್ಲಿ ಮನವಿ ಮಾಡಿದರು.

ಪಟ್ಟಣದಲ್ಲಿ ವಕೀಲರನ್ನು ಭೇಟಿ ಮಾಡಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಜಿಲ್ಲೆಗೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯೇ ಇದೆ. ಬೆಂಗಳೂರಿಗೆ ಸರಿಸಮಾನವಾಗಿ ಬೆಳೆಯುತ್ತಿರುವ ತುಮಕೂರು ನಗರ ಹಾಗೂ ಎಲ್ಲ ತಾಲ್ಲೂಕುಗಳ ಅಭಿವೃದ್ಧಿ ಪಡಿಸುವ ಗುರಿ ಇದೆ. ಜಿಲ್ಲೆಯ ಪ್ರಮುಖ ಬೆಳೆಯಾಗಿರುವ ತೆಂಗಿಗೆ ಉತ್ತಮ ಬೆಲೆ ಕೊಡಿಸುವ ಜವಾಬ್ದಾರಿ ಇದೆ. ತೆಂಗು ಬೆಳೆಗಾರರನ್ನು ಸಂಕಷ್ಟದಿಂದ ದೂರ ಮಾಡಬೇಕಿದೆ ಎಂದರು.

ಸಂಘದ ಅಧ್ಯಕ್ಷ ನಟರಾಜ್, ವಕೀಲರಾದ ಕುಮಾರ್ ಮತ್ತು ಮಂಜುನಾಥ್ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.