ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ, ಲೋಪದೋಷ ಕಂಡು ಬರದಂತೆ ಎಚ್ಚರವಹಿಸಿ

ಮಾರ್ಚ್ 27ರಿಂದ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 15:35 IST
Last Updated 20 ಮಾರ್ಚ್ 2020, 15:35 IST

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಳುಮಾರ್ಚ್ 27ರಿಂದ ಆರಂಭವಾಗಲಿದ್ದು, ಯಾವುದೇ ಲೋಪದೋಷಗಳಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ ಕುಮಾರ್ ಶುಕ್ರವಾರ ಸಲಹೆ ನೀಡಿದರು.

ಪರೀಕ್ಷೆ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ವಿದ್ಯಾರ್ಥಿಗಳು ಶಾಲಾ ಆವರಣ, ಪರೀಕ್ಷಾ ಕೇಂದ್ರಗಳಲ್ಲಿ ಗುಂಪಾಗಿ ಸೇರದಂತೆ ನೋಡಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ, ಉತ್ತರ ಪತ್ರಿಕೆಗಳನ್ನು ತರುವಾಗ ಭದ್ರತೆ ಒದಗಿಸಬೇಕು. ಪರೀಕ್ಷಾ ಕಾರ್ಯಕ್ಕೆ ಸೂಕ್ತ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜರ್ಸ್‍ಗಳನ್ನು ಇಡಬೇಕು. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಎಲ್ಲರೂ ಕೈಗಳನ್ನು ಸ್ವಚ್ಛಗೊಳಿಸಿದ ನಂತರವೇ ಪರೀಕ್ಷಾ ಕೊಠಡಿಗೆ ತೆರಳುವಂತೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ರೇವಣಸಿದ್ಧಪ್ಪ, ಡಯಟ್ ಪ್ರಾಂಶುಪಾಲ ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಯ್ಯ ಇದ್ದರು.

36,782 ಜಿಲ್ಲೆಯಲ್ಲಿ ವಿದ್ಯಾರ್ಥಿಗಳು

144 ಪರೀಕ್ಷಾ ಕೇಂದ್ರಗಳು

ಜ್ವರ, ಕೆಮ್ಮು, ನೆಗಡಿ ಇದ್ದವರಿಗೆ ಪ್ರತ್ಯೇಕ ಕೊಠಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.