
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ತುಮಕೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಕ್ಕಳ ಮುಂದಿನ ಕಲಿಕೆಗೆ ತಡೆಗೋಡೆ ಆಗಬಾರದು. ಕನಿಷ್ಠ ನಿಗದಿತ ಅಂಕಗಳನ್ನು ಸಹಜವಾಗಿ ಪಡೆದುಕೊಳ್ಳುವಂತಹ ರೀತಿಯಲ್ಲಿ ಬೋಧನೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ.ಮಹೇಶ್ ಸಲಹೆ ಮಾಡಿದರು.
ನಗರದಲ್ಲಿ ಈಚೆಗೆ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪ್ರೌಢಶಾಲೆಗಳ ಸಂಪನ್ಮೂಲ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪರೀಕ್ಷೆಯ ಅಂಕಗಳು ಮಕ್ಕಳ ನೈಜ ಕಲಿಕೆ ಪ್ರತಿಬಿಂಬಿಸುವಂತೆ ಇರಬೇಕು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕೆಂದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್.ಎನ್.ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.