ADVERTISEMENT

ತುಮಕೂರು: ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 5:41 IST
Last Updated 28 ಮಾರ್ಚ್ 2022, 5:41 IST
   

ತುಮಕೂರು: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಆರಂಭವಾಗಿದ್ದು, ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಜರಾದರು.

ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಗಳಿಗೆ ತೆರಳಿದರು.

ಕೋವಿಡ್ ಮಾರ್ಗಸೂಚಿ ಅನ್ವಯ ಪರೀಕ್ಷೆ ನಡೆಸಲಾಗುತ್ತಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 22,858 ಹಾಗೂ ಮಧುಗಿರಿಯಲ್ಲಿ 13,067 ವಿದ್ಯಾರ್ಥಿಗಳು ಸೇರಿದಂತೆ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 35,925 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ADVERTISEMENT

ತುಮಕೂರಿನಲ್ಲಿ 91 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 65 ಪರೀಕ್ಷಾ ಕೇಂದ್ರಗಳು ಒಳಗೊಂಡಂತೆ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 156 ಪರೀಕ್ಷಾ ಕೇಂದ್ರಗಲ್ಲಿ ಪರೀಕ್ಷೆ ಆರಂಭವಾಗಿದೆ.

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರು
ತುಮಕೂರು:
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಘಟನೆಶಿಕ್ಷಣ ಸಚಿವರ ತವರು ಕ್ಷೇತ್ರ ತಿಪಟೂರಿನಲ್ಲಿ ನಡೆದಿದೆ.

ನಗರದ ಸರ್ಕಾರಿ‌ ಬಾಲಕರ ಹಾಗೂ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ 15 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಪರೀಕ್ಷಾ ಕೇಂದ್ರದ ಒಳಗೂ ಹಿಜಾಬ್ ಧರಿಸಿ ಪ್ರವೇಶ ಪಡೆದರು.

ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಿಜಾಬ್ ತಗೆಯುವಂತೆ ಯಾವುದೇ ಸೂಚನೆ ನೀಡಲಿಲ್ಲ. ನಂತರ ವಿಷಯ ತಿಳಿದ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕಾರಿ ಕೊಠಡಿಗಳಿಗೆ ತೆರಳಿ ಹಿಜಾಬ್ ತೊರೆಯುವಂತೆ ಆದೇಶಿಸಿದ ನಂತರ ವಿದ್ಯಾರ್ಥಿನಿಯರು ಹಿಜಾಬ್ ತೆಗೆದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.