
ತುಮಕೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಬಹಿರಂಗಪಡಿಸಿದ ಆರೋಪದ ಮೇಲೆ ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿ ಅಡವನಹಳ್ಳಿಯ ದಿಗ್ವಿಜಯ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕ (ಪ್ರಭಾರ) ಗಿರೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಗಣಿತ ಪ್ರಶ್ನೆ ಪತ್ರಿಕೆಯನ್ನು ಶಿವಮೊಗ್ಗ ಜಿಲ್ಲೆಯ ಸಂಬಂಧಿಕರೊಬ್ಬರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿಕೊಟ್ಟಿದ್ದರು. ಅದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಪರೀಕ್ಷಾ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಂದ ಬಂದಿದ್ದ ಪೊಲೀಸರು ಶಿಕ್ಷಕ ಗಿರೀಶ್ ಅವರನ್ನು ಬಂಧಿಸಿ, ಕರೆದುಕೊಂಡು ಹೋಗಿದ್ದಾರೆ.
‘ಪೂರ್ವ ಸಿದ್ಧತೆಯ ಪ್ರಶ್ನೆ ಪತ್ರಿಕೆಗಳನ್ನು ಶಾಲೆಗಳ ಮುಖ್ಯ ಶಿಕ್ಷಕರ ಲಾಗಿನ್‌ಗೆ ನೇರವಾಗಿ ಪರೀಕ್ಷಾ ಮಂಡಳಿಯಿಂದ ಕಳುಹಿಸಲಾಗುತ್ತದೆ. ಪರೀಕ್ಷೆಯ ದಿನ ಪ್ರಿಂಟ್ ತೆಗೆದುಕೊಂಡು, ಮಕ್ಕಳಿಗೆ ನೀಡಿ ಪರೀಕ್ಷೆ ನಡೆಸಬೇಕು. ಆ ಸಮಯದಲ್ಲಿ ಗಣಿತ ಪ್ರಶ್ನೆ ಪತ್ರಿಕೆ ಬಹಿರಂಗ ಆಗಿರಬಹುದು’ ಎಂದು ತುರುವೇಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.