ADVERTISEMENT

ಎಸ್‌ಟಿ ಮೀಸಲಾತಿ; ಜೂ.9ರಿಂದ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 27 ಮೇ 2019, 12:59 IST
Last Updated 27 ಮೇ 2019, 12:59 IST
ಪ್ರಸನ್ನಾನಂದ ಸ್ವಾಮೀಜಿ
ಪ್ರಸನ್ನಾನಂದ ಸ್ವಾಮೀಜಿ   

ತುಮಕೂರು: ಕೇಂದ್ರ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ನೀಡಿರುವ ಶೇ 7.5 ಮೀಸಲಾತಿಯನ್ನು ರಾಜ್ಯ ಸರ್ಕಾರವೂ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜೂ.9ರಿಂದ ರಾಜ್ಯದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಪಾದಯಾತ್ರೆ ಸಂಬಂಧ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮಠದಿಂದ ಆರಂಭವಾಗುವ ಪಾದಯಾತ್ರೆಯು ದಾವಣಗೆರೆ, ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರದ ಮೂಲಕ ಜೂ.24ಕ್ಕೆ ಬೆಂಗಳೂರು ತಲುಪಲಿದೆ. ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ADVERTISEMENT

ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ‘ಮೀಸಲಾತಿ ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. 1978ರಿಂದಲೇ ಈ ಬಗ್ಗೆ ಹೋರಾಟ ನಡೆದಿದೆ. ಆದರೂ ನಮ್ಮ ಸಮುದಾಯಕ್ಕೆ ಮೀಸಲಾತಿಯನ್ನು ರಾಜ್ಯ ಸರ್ಕಾರ ನೀಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.