ADVERTISEMENT

ಅಕ್ರಮ ಗಣಿಗಾರಿಕೆ: ₹ 9 ಲಕ್ಷ ಮೌಲ್ಯದ ಕಲ್ಲು ವಶ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 15:22 IST
Last Updated 13 ಡಿಸೆಂಬರ್ 2019, 15:22 IST

ತುಮಕೂರು: ಕೋರ ಹೋಬಳಿ ನರಸೀಪುರ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆ ಸ್ಥಳದ ಮೇಲೆ ಶುಕ್ರವಾರ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಉಮಾಶಂಕರ್ ಗಣಿಗಾರಿಕೆಗೆ ಬಳಸುತ್ತಿದ್ದ ಪರಿಕರ ಹಾಗೂ ಅಕ್ರಮವಾಗಿ ಸಂಗ್ರಹಿಸಿದ್ದ ₹ 9 ಲಕ್ಷ ಮೌಲ್ಯದ ಕಲ್ಲನ್ನು ವಶಪಡಿಸಿಕೊಂಡಿದ್ದಾರೆ.

ಗ್ರಾಮದ ಬೆಳಧರ ಬಳಿ ಗಣಿಗಾರಿಕೆ ನಡೆಯುತ್ತಿರುವ ಕುರಿತು ಎಸಿಬಿಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಸಂಬಂಧ ಮಾಹಿತಿ ಸಂಗ್ರಹಿಸಿದ ಡಿವೈಎಸ್‌ಪಿ ಬೆಳಧರ ಗ್ರಾಮಪಂಚಾಯಿತಿ ಅಧ್ಯಕ್ಷ ಮೋಹನ್‌ ಅವರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದನ್ನು ಪತ್ತೆಹಚ್ಚಿದ್ದಾರೆ.

2011ರಿಂದ 2016ರವರೆಗೆ ಗಣಿಗಾರಿಕೆ ನಡೆಸಲು ಮೋಹನ್‌ ಪರವಾನಗಿ ಪಡೆದಿದ್ದರು. ನಂತರ ಪರವಾನಗಿ ನವೀಕರಿಸದೆ ಗಣಿಗಾರಿಕೆ ಮುಂದುವರಿಸಿದ್ದರು ಎಂದು ಡಿವೈಎಸ್‌ಪಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.