ADVERTISEMENT

ವಿದ್ಯಾರ್ಥಿ ಸಾವು: ಜಿಲ್ಲಾಧಿಕಾರಿ ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 11:00 IST
Last Updated 16 ಅಕ್ಟೋಬರ್ 2018, 11:00 IST
ತುಮಕೂರು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮಗನ ಶವ ಇಟ್ಟು ತಾಯಿ ಪ್ರತಿಭಟನೆ ನಡೆಸಿದಾಗ ಪೊಲೀಸರು ಮನವೊಲಿಸಲು ಯತ್ನಿಸಿದರು.
ತುಮಕೂರು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮಗನ ಶವ ಇಟ್ಟು ತಾಯಿ ಪ್ರತಿಭಟನೆ ನಡೆಸಿದಾಗ ಪೊಲೀಸರು ಮನವೊಲಿಸಲು ಯತ್ನಿಸಿದರು.   

ತುಮಕೂರು: ನೆಲಮಂಗಲ ತಾಲ್ಲೂಕು ದೇವರ ಹೊಸಹಳ್ಳಿಗೆ ಎನ್‌ಎಸ್‌ಎಸ್ ಶಿಬಿರಕ್ಕೆ ಹೋಗಿದ್ದಾಗ ಸೋಮವಾರ ನಿಜಗಲ್ ಕೆರೆಯಲ್ಲಿ ಬಿದ್ದು ಮೃತಪಟ್ಟ ವಿದ್ಯಾರ್ಥಿ ಪೂರ್ಣಚಂದ್ರನ ಶವವನ್ನು ಜಿಲ್ಲಾಧಿಕಾರಿಕಚೇರಿ ಮುಂದೆ ಪೋಷಕರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತಮ್ಮ ಮಗನ ಸಾವಿಗೆ ತುಮಕೂರಿನ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಅಡಳಿತ ಮಂಡಳಿ ನಿರ್ಲಕ್ಷ್ಯವೇ ಕಾರಣ. ನ್ಯಾಯ ದೊರಕಿಸಿಕೊಡಬೇಕು ಎಂದು ವಿದ್ಯಾರ್ಥಿಯ ತಾಯಿ ಕ್ಯಾತ್ಸಂದ್ರದ ನಿವಾಸಿ ಮಂಜುಳಾ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು, ಪ್ರಕರಣಕ್ಕೆ ಸಂಬಂದಪಟ್ಟಂತೆ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.

ADVERTISEMENT

ಕೂಡಲೇ ಪತ್ರ ಬರೆಯಬೇಕು ಎಂದು ಪೋಷಕರು, ವಿದ್ಯಾರ್ಥಿಗಳು ಪಟ್ಟು ಹಿಡಿದಾಗ ಹೆಚ್ಷುವರಿ ಜಿಲ್ಲಾಧಿಕಾರಿ ಎಸ್ಪಿಯವರಿಗೆ ಪತ್ರ ಬರೆದು ಪತ್ರದ ಪ್ರತಿಯನ್ನು ಪೋಷಕರಿಗೆ ನೀಡಿದ ಬಳಿಕ ಪೋಷಕರು ಶವ ತೆಗೆದುಕೊಂಡು ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.