
ಪ್ರಜಾವಾಣಿ ವಾರ್ತೆತಿಪಟೂರು: ನಗರದ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುತ್ತಿದ್ದ ಸಿದ್ಧಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಡಿ.ಎಸ್.ವರ್ಷಿಣಿ (19) ಸಾವನ್ನಪ್ಪಿದ್ದಾರೆ.
ನಗರದ ಕಲ್ಪತರು ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ದೇವರಹಳ್ಳಿ ಗ್ರಾಮದವರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅರಸೀಕೆರೆ ರ‍್ವೆಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.