ADVERTISEMENT

ತುಮಕೂರು | ಇಂಟರ್ನಲ್‌ನಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 7:33 IST
Last Updated 10 ಜೂನ್ 2022, 7:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಇತ್ತೀಚೆಗಷ್ಟೇ ನಡೆದ ಎಸ್ಐಟಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ವಿಚಾರ ಮಾಸುವ ಮುನ್ನವೆ, ಮತ್ತೊಬ್ಬ ವಿದ್ಯಾರ್ಥಿ ಗುರುವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ಭುವನ್ ನಗರದ ಬಟವಾಡಿ ಬಳಿಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭುವನ್, ದ್ವಿತೀಯ ಪಿಯುಸಿ ಆಂತರಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿಗಳು ಭುವನ್‌ರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಹಾವು ಕಡಿದು ರೈತ ಸಾವು
ತುಮಕೂರು: ಪಾವಗಡ ತಾಲ್ಲೂಕಿನ ದೊಮ್ಮತಮರಿ ಬಳಿಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಹಾವು ಕಡಿದು ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ADVERTISEMENT

ದೊಮ್ಮತಮರಿ ಗ್ರಾಮದ ವಸಂತ್ (32) ಮೃತರು. ಹಾವು ಕಚ್ಚಿದ ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, 1 ವರ್ಷದ ಪುತ್ರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.