ADVERTISEMENT

ದ್ವಿತೀಯ ಪಿಯು ಪರೀಕ್ಷೆ: 710 ಮಂದಿ ಗೈರು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 10:26 IST
Last Updated 12 ಮಾರ್ಚ್ 2020, 10:26 IST

ತುಮಕೂರು: ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಐಚ್ಛಿಕ ಕನ್ನಡ, ಅಕೌಂಟೆನ್ಸಿ ಮತ್ತು ಗಣಿತ ವಿಷಯಗಳ ಪರೀಕ್ಷೆಯಲ್ಲಿ ಒಟ್ಟು 710 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಐಚ್ಛಿಕ ಕನ್ನಡ ವಿಷಯಕ್ಕೆ ನೋಂದಣಿಯಾದ 240 ವಿದ್ಯಾರ್ಥಿಗಳ ಪೈಕಿ 200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 40 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅಕೌಂಟೆನ್ಸಿ ವಿಷಯಕ್ಕೆ ನೋಂದಣಿಯಾದ 10808 ವಿದ್ಯಾರ್ಥಿಗಳ ಪೈಕಿ 10365 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 443 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಗಣಿತ ವಿಷಯಕ್ಕೆ ನೋಂದಣಿಯಾದ 8382 ವಿದ್ಯಾರ್ಥಿಗಳ ಪೈಕಿ 8155 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 227 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲಲಿತಕುಮಾರಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.