ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಉಪವಿಭಾಗಾಧಿಕಾರಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 16:23 IST
Last Updated 30 ಜುಲೈ 2024, 16:23 IST
ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮಾಂತರ ಸನಿವಾಸ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ ಪಾಠ ಮಾಡಿದರು
ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮಾಂತರ ಸನಿವಾಸ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ ಪಾಠ ಮಾಡಿದರು   

ಮಧುಗಿರಿ: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಉತ್ತಮ ವಿದ್ಯಾಬ್ಯಾಸ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಗೋಟೋರು ಶಿವಪ್ಪ ಸಲಹೆ ನೀಡಿದರು.

ತಾಲ್ಲೂಕಿನ ಹೊಸಕೆರೆ ಗ್ರಾಮಾಂತರ ಸನಿವಾಸ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೋಮವಾರ ದ.ರಾ. ಬೇಂದ್ರೆ ಅವರ ‘ಹಕ್ಕಿ ಹಾರುತಿದೆ ನೋಡಿದಿರಾ’ ಪದ್ಯ ಹೇಳುವ ಮೂಲಕ ಪಾಠ ಮಾಡಿದರು.

ಅಂದಿನ ಪಾಠಗಳನ್ನು ಅಂದೇ ಅಭ್ಯಾಸ ಮಾಡಿದರೆ ಪರೀಕ್ಷೆ ಎದುರಿಸಲು ಸುಲುಭವಾಗುತ್ತದೆ. ವಿದ್ಯಾರ್ಥಿಗಳು ಶ್ರಮವಹಿಸಿ ವಿದ್ಯಾಬ್ಯಾಸ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಮುಖ್ಯ ಶಿಕ್ಷಕಿ ಕಮಲಮ್ಮ, ಶಿಕ್ಷಕರಾದ ಮಲ್ಲಿಕಾರ್ಜುನಯ್ಯ, ರಾಮಕೃಷ್ಣ , ನಂದಿನಿ, ಭೋಜಪ್ಪ ರಾಕೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.