ADVERTISEMENT

ಯಶಸ್ಸಿಗೆ ಉತ್ತಮ ಚಿಂತನೆಯೇ ದಾರಿ

ಕನ್ನಿಕಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 16:54 IST
Last Updated 24 ಏಪ್ರಿಲ್ 2019, 16:54 IST
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು   

ತುಮಕೂರು: ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ಕನ್ನಿಕಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟಾಚಲಪತಿ ತಿಳಿಸಿದರು.

ನಗರದ ಕನ್ನಿಕಾ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಕೆಟ್ಟದ್ದನ್ನು ಬದಿಗಿಟ್ಟು ಉಪನ್ಯಾಸಕರು ಹೇಳಿದ ಮಾರ್ಗದರ್ಶನದಲ್ಲಿ ನಡೆದಲ್ಲಿ ಮಾತ್ರ ಜೀವನದ ಜೊತೆಗೆ ತಕ್ಕ ಫಲಿತಾಂಶ ಪಡೆಯಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬದ್ಧರಾಗಿರಬೇಕು ಎಂದು ಹೇಳಿದರು.

ADVERTISEMENT

ಕಾಲೇಜಿನ ನಿರ್ದೇಶಕ ಡಾ.ರಾಮಪ್ಪ, ‘ವಿದ್ಯಾರ್ಥಿಗಳು ಶ್ರಮ ವಹಿಸಿ ಅಭ್ಯಾಸ ಮಾಡಿರುವುದರಿಂದ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಕನ್ನಡ ಮಾಧ್ಯಮದಿಂದ ಬಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.