ತುಮಕೂರಿನ ಕಲಾ ಕಾಲೇಜಿನಲ್ಲಿ ಬುಧವಾರ ವಾರ್ಷಿಕೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಿರಾ ಜೆಎಂಎಫ್‍ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ನರಸಿಂಹಮೂರ್ತಿ, ವಾಗ್ಮಿ ಜೆ.ಎನ್.ಜಗನ್ನಾಥ್, ವಿ.ವಿ ಕುಲಸಚಿವ ಪ್ರೊ.ಎಂ.ಕೊಟ್ರೇಶ್, ಆರ್.ಸುದೀಪ್‌ಕುಮಾರ್ ಇತರರು ಉಪಸ್ಥಿತರಿದ್ದರು
ತುಮಕೂರು: ನಿರಂತರ ಅಭ್ಯಾಸದಿಂದ ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳಬಹುದು, ಉನ್ನತ ಹುದ್ದೆ ಸ್ವೀಕರಿಸಬಹುದು ಎಂದು ಶಿರಾ ಜೆಎಂಎಫ್‍ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ನರಸಿಂಹಮೂರ್ತಿ ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಬುಧವಾರ ಕಲಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ಸಮ್ಮಿಲನ-2025’ ಉದ್ಘಾಟಿಸಿ ಮಾತನಾಡಿದರು.
ಪ್ರಪಂಚದಲ್ಲಿ ಸಾಧನೆಗೆ ಯಾವುದೇ ಅಡ್ಡದಾರಿ ಇಲ್ಲ. ಪ್ರತಿಯೊಂದು ಕಾರ್ಯದಲ್ಲಿ ಪ್ರಾಮಾಣಿಕ ಪ್ರಯತ್ನ ಇರಬೇಕು. ದಿನ ನಿತ್ಯದ ಚಟುವಟಿಕೆಗಳ ಆಧಾರದ ಮೇಲೆ ನಮ್ಮ ಭವಿಷ್ಯ ನಿಂತಿದೆ. ಗುರುಗಳ ಮಾರ್ಗದರ್ಶನದಂತೆ ನಡೆದರೆ ಉನ್ನತ ಮಟ್ಟಕ್ಕೆ ತಲುಪಬಹುದು. ಒಳ್ಳೆಯ ವಿಚಾರ, ಉದ್ದೇಶ, ಕಲಿಕೆಯ ಕಡೆ ಗಮನ ಇರಲಿ ಎಂದು ಸಲಹೆ ಮಾಡಿದರು.
ವಾಗ್ಮಿ ಜೆ.ಎನ್.ಜಗನ್ನಾಥ್, ‘ಶ್ರದ್ಧೆ, ಏಕಾಗ್ರತೆಯಿಂದ ಕೆಲಸ ಮಾಡಿದರೆ ಅದುವೇ ನಿಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಶಿಕ್ಷಣದ ಜತೆಗೆ ಕಲೆ, ಕೌಶಲ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.
ವಿ.ವಿ ಕುಲಸಚಿವ ಪ್ರೊ.ಎಂ.ಕೊಟ್ರೇಶ್, ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಕಾರ್ಯದರ್ಶಿ ಎ.ಎನ್.ಪ್ರಭಾಕರ್, ಪ್ರಾಧ್ಯಾಪಕರಾದ ಬಿ.ಕರಿಯಣ್ಣ, ಸಿ.ಎಂ.ರವಿ, ಆರ್.ಸುದೀಪ್‌ಕುಮಾರ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.