ADVERTISEMENT

ಶಸ್ತ್ರ ಚಿಕಿತ್ಸೆ ನಡೆಸಿ 8.5 ಕೆ.ಜಿ ಅಂಡಾಶಯ ಗೆಡ್ಡೆ ಹೊರ ತೆಗೆದ ವೈದ್ಯರು

ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವೈದ್ಯರ ಸಾಧನೆ

​ಪ್ರಜಾವಾಣಿ ವಾರ್ತೆ
Published 30 ಮೇ 2019, 14:55 IST
Last Updated 30 ಮೇ 2019, 14:55 IST
   

ತುಮಕೂರು: ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಅಂಡಾಶಯ ಗೆಡ್ಡೆಯ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಸುಮಾರು ಎರಡು ವರ್ಷಗಳಿಂದ ಕ್ಲಿಷ್ಟಕರ ಅಂಡಾಶಯದ ಗೆಡ್ಡೆಯ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಹಿಳೆಗೆ ಶಸ್ತ್ರಚಿಕಿತ್ಸೆ ನರವೇರಿಸಿ 8.5 ಕೆ.ಜಿಯಷ್ಟು ಅಂಡಾಶಯ ಗೆಡ್ಡೆಯನ್ನು ಹೊರ ತೆಗೆದು ಯಶಸ್ವಿ ಚಿಕಿತ್ಸೆ ನೆರವೇರಿಸಿದ್ದಾರೆ.

ಮಧುಗಿರಿ ಮೂಲದ ಗಿರಿಜಮ್ಮ( ಹೆಸರನ್ನು ಬದಲಾಯಿಸಲಾಗಿದೆ). ಅಂಡಾಶಯ ಗೆಡ್ಡೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿ ಮುಂತಾದ ರೋಗದಿಂದ ಬಳಲುತ್ತಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ. ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡಿದ್ದರು. ಬಳಿಕ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿ 8.5 ಕೆ.ಜಿ ಅಂಡಾಶಯ ಗೆಡ್ಡೆ ಹೊರ ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಬೇರೆ ಈ ಶಸ್ತ್ರ ಚಿಕಿತ್ಸೆ ನಡೆಸಿದ್ದರೆ ಲಕ್ಷಾಂತರ ವೆಚ್ಚ ಆಗುತ್ತಿತ್ತು. ಆದರೆ, ಇಲ್ಲಿ ಕನಿಷ್ಠ ಖರ್ಚಿನಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇದೊಂದು ಅಪರೂಪದ ಮತ್ತು ಕ್ಷಿಷ್ಟಕರ ಶಸ್ತ್ರಚಿಕಿತ್ಸೆ ಎಂದು ಹೇಳಿದ್ದಾರೆ.

ಅಂಡಾಶಯ ಗೆಡ್ಡೆ ತೊಂದರೆಗೆ ಚಿಕಿತ್ಸೆ ಪಡೆಯುವ ಒಂದು ಸಾವಿರ ಮಂದಿಯಲ್ಲಿ ಗುಣಮುಖರಾಗುವವರು ಒಬ್ಬರು ಮಾತ್ರ ಎಂದು ಹೇಳಿದ್ದಾರೆ.

ಶ್ರೀದೇವಿ ಆಸ್ಪತ್ರೆಯ ಪ್ರಸವ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಗುರುಮೂರ್ತಿ, ಅರಿವಳಿಕೆ ತಜ್ಞರಾದ ಡಾ. ನಂದೀಶ್, ಡಾ.ವಸಂತ್, ಡಾ.ಹೆಚ್.ಇಂದಿರಾ, ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರು ಸೇರಿದಂತೆ ಅನುಭವಿ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀದೇವಿ ಕಾಲೇಜಿನ ಮುಖ್ಯಸ್ಥರಾದ ಡಾ.ಎಂ.ಆರ್. ಹುಲಿನಾಯ್ಕರ್, ‘ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಧುನಿಕ ಸೌಲಭ್ಯಗಳಿದ್ದು, ಸಾರ್ವಜನಿಕರು ಉಪಯೋಗ ಮಾಡಿಕೊಳ್ಳಬೇಕು. ಅತ್ಯಂತ ಕಡಿಮೆ ವೆಚ್ಚದಲ್ಲಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಡಾ.ರಮಣ್ ಆರ್. ಹುಲಿನಾಯ್ಕರ್ ಮತ್ತು ಶ್ರೀದೇವಿ ವೈದ್ಯಕೀಯ ಪ್ರಾಂಶುಪಾಲರಾದ ಡಾ.ಡಿ.ಕೆ. ಮಹಾಬಾರಾಜ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ ಅವರು ವೈದ್ಯರ ತಂಡಕ್ಕೆ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.