ADVERTISEMENT

ಸೀಮೆ ಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ: ಪೊಲೀಸರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಮೇ 2022, 5:26 IST
Last Updated 20 ಮೇ 2022, 5:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ಇಬ್ಬರು ಪೊಲೀಸರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಗ್ರಾಮದ ಗೋವಿಂದರಾಜು (40) ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೆಯವರನ್ನು ಹೆದರಿಸಿದ್ದಾರೆ. ಈತನ ವರ್ತನೆಯಿಂದ ಹೆದರಿದ ಮನೆಯವರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವ ವೇಳೆಗೆ ಗೋವಿಂದರಾಜು ಕೊಠಡಿಯೊಳಗೆ ಸೇರಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆತನನ್ನು ರಕ್ಷಿಸಲು ಪೊಲೀಸರು ಮುಂದಾದರು ಗೋವಿಂದರಾಜು ಜೀವಂತವಾಗಿ ಉಳಿಯಲಿಲ್ಲ.

ಘಟನೆಯಲ್ಲಿ ಗ್ರಾಮಾಂತರ ಠಾಣೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.