ಕೊರಟಗೆರೆ: ತಾಲ್ಲೂಕಿನ ಗೌರಗಾನಹಳ್ಳಿ ಗ್ರಾಮದ ಧನಂಜಯ್ (26) ಸಾವಿನ ಅನುಭವ ಪಡೆಯಬೇಕು ಎಂದು ಭಾನುವಾರ ‘ಟಿಕ್‌ಟಾಕ್’ ವಿಡಿಯೊ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಷ ಸೇವನೆಗೂ ಮುನ್ನ ಧನಂಜಯ್, ‘ಜೀವನದಲ್ಲಿ ಒಂದು ಸಲ ಸಾಯಬೇಕು. ಅದು ಹೇಗಿರುತ್ತದೆ ಎಂಬ ಅನುಭವ ಪಡೆಯಬೇಕು. ನಾನು ಸಾಯುವುದಕ್ಕೆ ಪ್ರಯತ್ನ ಪಡುತ್ತಿದ್ದೇನೆ. ಅದನ್ನು ನೀವೆಲ್ಲ ನೋಡಬೇಕು’ ಎಂದು ಟಿಕ್‌ಟಾಕ್‌ನಲ್ಲಿ ವಿಡಿಯೊನಲ್ಲಿ ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಕ್ರಿಮಿನಾಶಕ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಧನಂಜಯ್‌ಗೆ 4 ತಿಂಗಳ ಹಿಂದೆ ವಿವಾಹವಾಗಿತ್ತು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.