ADVERTISEMENT

ಅಂಗನವಾಡಿ ಕಾರ್ಯಕರ್ತೆಯ ಆತ್ಮಹತ್ಯೆ; ಯಾವುದೇ ಅನುಮಾನಗಳು ಇಲ್ಲ ಎಂದ ಪತಿ

ಕರಡಾಳು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯ ಆತ್ಮಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 6:52 IST
Last Updated 28 ಆಗಸ್ಟ್ 2020, 6:52 IST

ತುಮಕೂರು: ತಿಪಟೂರು ತಾಲ್ಲೂಕು ಕರಡಾಳು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿಯೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಸಾವಿನ ಬಗ್ಗೆ ಯಾವುದೇ ಅನುಮಾನಗಳು ಇಲ್ಲ ಎಂದು ಮೃತರ ಪತಿ ನರಸಿಂಹಮೂರ್ತಿ ಪೊಲೀಸರಿಗೆ ವಿವರಣೆ ನೀಡಿದ್ದಾರೆ.

15 ವರ್ಷದಿಂದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಮೂರ್ನಾಲ್ಕು ತಿಂಗಳಿನಿಂದ ಮಂಜುಳಾ ಅವರ ಮೈ ಉರಿ ಬರುತ್ತಿತ್ತು. ಚಿಕಿತ್ಸೆ ಕೊಡಿಸುತ್ತಿದ್ದೆವು. ವೈದ್ಯರು ರಕ್ತ ಕಡಿಮೆ ಇದೆ ಎಂದು ಹೇಳಿದ್ದರು. ಆದರೆ ಕಾಯಿಲೆ ಗುಣಮುಖವಾಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ನೊಣವಿನಕೆರೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮಂಜುಳಾ ಸಾವಿಗೆ ಅಂಗನವಾಡಿ ಮೇಲ್ವಿಚಾರಕಿಯ ಕಿರುಕುಳ ಕಾರಣ ಎಂದು ವಿವಿಧ ಸಂಘಟನೆಗಳ ಮುಖಂಡರು ಆರೋಪಿಸಿದ್ದರು. ಈ ಬಗ್ಗೆ ಗಾಳಿ ಸುದ್ದಿಯೂ ಹರಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.