ಗುಬ್ಬಿ: ಮಕ್ಕಳಲ್ಲಿ ಚಟುವಟಿಕೆ ಮೂಡಿಸಿ ಓದಿನಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ಚೇಳೂರು ಹೋಬಳಿ ನಲ್ಲೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಗ್ರಂಥಾಲಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿ ಬೇಸಿಗೆ ಶಿಬಿರಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಮಕ್ಕಳಿಗೆ ಓದುವ ಹವ್ಯಾಸ ರೂಢಿಸುವ ಜತೆಗೆ ರಜಾ ದಿನಗಳಲ್ಲಿ ಜ್ಞಾನಾರ್ಜನೆ ಪಡೆದುಕೊಳ್ಳಲು ಉತ್ತೇಜಿಸಲಾಗುವುದು. ಓದಿನ ಜತೆಗೆ ಬೇರೆ ಬೇರೆ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯಗೊಳಿಸಲಾಗುವುದು. ಇದರಿಂದ ರಜಾ ದಿನಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಪೋಷಕರಿಗೂ ಶಿಬಿರದ ಮಹತ್ವ ಬಗ್ಗೆ ತಿಳಿಸಲಾಗಿದೆ. ಪೋಷಕರು ಮಕ್ಕಳನ್ನು ಕಳುಹಿಸಲು ಮುಂದಾಗುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವತ್ಸಲ ಎಸ್.ವಿ ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಂಥಪಾಲಕಿ ಲಕ್ಷ್ಮಿ, ಸಿಬ್ಬಂದಿ, ಸಾರ್ವಜನಿಕರು, ಮಕ್ಕಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.