ADVERTISEMENT

ಕೊರಟಗೆರೆ: ಪರಮೇಶ್ವರ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 7:12 IST
Last Updated 2 ಜನವರಿ 2026, 7:12 IST
ಕಾಂಗ್ರೆಸ್ ಕಾರ್ಯಕರ್ತರು ಜಿ.ಪರಮೇಶ್ವರ ಮುಖ್ಯಮಂತ್ರಿ ಆಗಲಿ ಎಂದು ಹಾರೈಸಿ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿಗೆ 108 ಕಾಯಿ ಒಡೆದು ಪೂಜೆ ಸಲ್ಲಿಸಿದರು
ಕಾಂಗ್ರೆಸ್ ಕಾರ್ಯಕರ್ತರು ಜಿ.ಪರಮೇಶ್ವರ ಮುಖ್ಯಮಂತ್ರಿ ಆಗಲಿ ಎಂದು ಹಾರೈಸಿ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿಗೆ 108 ಕಾಯಿ ಒಡೆದು ಪೂಜೆ ಸಲ್ಲಿಸಿದರು   

ಕೊರಟಗೆರೆ: ಗೃಹ ಸಚಿವ ಜಿ.ಪರಮೇಶ್ವರ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿ ಹೊಸವರ್ಷದ ಮೊದಲ ದಿನ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರು ತಾಲ್ಲೂಕಿನ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ 108 ತೆಂಗಿನ ಕಾಯಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್ ಮಾತನಾಡಿ, ಜಿ.ಪರಮೇಶ್ವರ ಎಂಟು ವರ್ಷ ಕೆಪಿಸಿಸಿ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2013ರಲ್ಲಿ ಮತ್ತು 2018 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದಾರೆ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಿಲ್ಲ. ಈಗ ಸಿದ್ದಾರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಬದಲಾದರೆ ಜಿ.ಪರಮೇಶ್ವರ ಅವರನ್ನೇ ಮುಖ್ಯಮಂತ್ರಿ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕರೆ ಶಂಕರ್ ಮಾತನಾಡಿ, ಜಿ. ಪರಮೇಶ್ವರ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಸರ್ಕಾರ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ADVERTISEMENT

ಕೆಪಿಸಿಸಿ ಸದಸ್ಯ ಎ.ಡಿ.ಬಲರಾಮಯ್ಯ, ಮಹಿಳಾ ಅಧ್ಯಕ್ಷೆ ಜಯಮ್ಮ ಹಾಗೂ ಎಚ್.ಕೆ.ಮಹಾಲಿಂಗಪ್ಪ, ಕೆ.ಆರ್.ಓಬಳರಾಜು, ಹೊಳವನಹಳ್ಳಿ ಜಯರಾಮ್, ಎಲ್.ರಾಜಣ್ಣ, ಟಿ.ಸಿ.ರಾಮಯ್ಯ, ಉಮಾಶಂಕರ್, ವಿನಯ್ ಕುಮಾರ್, ಮಹೇಶ್, ಗೋಟು ಉಮೇಶ್, ನಾರಾಯಣಪ್ಪ, ವೆಂಕಟಪ್ಪ, ನರಸಿಂಹಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.