ADVERTISEMENT

ಸೆ.19ರಂದು ಶಿಕ್ಷಣ ಸಚಿವರಿಂದ ಎನ್.ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಶಾಲಾ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 14:03 IST
Last Updated 18 ಸೆಪ್ಟೆಂಬರ್ 2019, 14:03 IST
ಎಸ್.ಸುರೇಶ್ ಕುಮಾರ್
ಎಸ್.ಸುರೇಶ್ ಕುಮಾರ್   

ತುಮಕೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅವರು ಸೆ.19ರ ರಾತ್ರಿ ಪಾವಗಡ ತಾಲ್ಲೂಕು ಎನ್.ಅಚ್ಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡುವರು.

ಸಚಿವರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅಲ್ಲಿನ ಶಾಲಾ ಪರಿಸರ ಅರಿತುಕೊಳ್ಳುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಂಜೆ 6ಕ್ಕೆ ಗಡಿನಾಡ ಶಾಲೆಗಳ ಪ್ರಚಲಿತ ಸಮಸ್ಯೆಗಳು, ತಾಲ್ಲೂಕು ಮತ್ತು ಜಿಲ್ಲೆಯ ಶೈಕ್ಷಣಿಕ ವಿಚಾರಗಳ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸುವರು. 6.30ಕ್ಕೆ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು, ಪೋಷಕರೊಂದಿಗೆ ಸಂವಾದ ನಡೆಸಿ ರಾತ್ರಿ 10ಕ್ಕೆ ವಿದ್ಯಾರ್ಥಿಗಳು ನಡೆಸಿಕೊಡುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಅದೇ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ADVERTISEMENT

ಸೆ.20ರ ಬೆಳಿಗ್ಗೆ 8ಕ್ಕೆ ತಾಲ್ಲೂಕು ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ಗಡಿನಾಡು ಶಾಲೆಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸುವರು. ಬೆಳಿಗ್ಗೆ 9ಕ್ಕೆ ವೆಂಕಟಮ್ಮನಹಳ್ಳಿ, ಕ್ಯಾತಗಾನಚರ್‍ಲು, ವಳ್ಳೂರು ಹಾಗೂ ತಿರುಮಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿ ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸುವರು. 11.30ಕ್ಕೆ ಬೆಂಗಳೂರಿಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.