ದಿನೇಶ್ ಗುಂಡೂರಾವ್
ತುಮಕೂರು: ರಾಜ್ಯದಾದ್ಯಂತ 108 ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಈ ಬಾರಿ ಬಜೆಟ್‌ನಲ್ಲಿ ‘ಮೇಜರ್ ಸರ್ಜರಿ’ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘108 ಆಂಬುಲೆನ್ಸ್ ವ್ಯವಸ್ಥೆಗೆ ಹೊಸ ರೂಪ ನೀಡಲಾಗುತ್ತಿದೆ. ಈ ಬಜೆಟ್‌ನಲ್ಲಿ ಅದನ್ನು ಪ್ರಕಟಿಸಲಾಗುತ್ತದೆ. ಮುಂದೆ ಸಾಕಷ್ಟು ಸುಧಾರಣೆಯಾಗಲಿದೆ’ ಎಂದು ಹೇಳಿದರು.
ಬಾಣಂತಿ– ಮಗು ಸಾವಿನ ಸಂಖ್ಯೆ ಹೆಚ್ಚಾದ ಸಮಯದಲ್ಲಿ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗಿದೆ. ಮುಂದೆ ಮತ್ತಷ್ಟು ಕಡಿಮೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ಕಾಯಿಲೆಯಿಂದ ಮಹಾರಾಷ್ಟ್ರದಲ್ಲಿ ಸಾವು ಸಂಭವಿಸಿದೆ. ರಾಜ್ಯದಲ್ಲಿ ಅಂತಹ ಗಂಭೀರ ಸ್ಥಿತಿ ಇಲ್ಲ. ಅನಗತ್ಯವಾಗಿ ಜನರಲ್ಲಿ ಭಯ ಹುಟ್ಟಿಸಬಾರದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.