
ಪ್ರಜಾವಾಣಿ ವಾರ್ತೆಗುಬ್ಬಿ: ತಾಲ್ಲೂಕಿನ ನಾರನಹಳ್ಳಿ ಗ್ರಾಮದ ಉದಯ್ (12) ಶನಿವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಉದಯ್, ಶಂಕರೇಗೌಡ ಎಂಬುವವರ ಪುತ್ರ.
ತೋಟಕ್ಕೆ ತೆರಳಿದ್ದ ಬಾಲಕ ಮನೆಗೆ ವಾಪಸ್ ಬಾರದಿದ್ದಾಗ ಪೋಷಕರು ಹುಡುಕಿಕೊಂಡು ಹೋಗಿದ್ದಾರೆ. ಆಗ ಶವ ಪೊದೆಯಲ್ಲಿ ಪತ್ತೆಯಾಗಿದೆ.
ಚಿರತೆದಾಳಿಯಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಗ್ರಾಮದಲ್ಲಿ ಸುದ್ದಿ ಹರಡಿದೆ. ಬಾಲಕನ ಮೈ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮತ್ತಷ್ಟು ಮಂದಿ ಕೊಲೆ ಎಂದು ಶಂಕಿಸುತ್ತಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿ.ಎಸ್.ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.