
ಸಾವು
(ಪ್ರಾತಿನಿಧಿಕ ಚಿತ್ರ)
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೌಡನಹಳ್ಳಿ ತೋಟದ ಮನೆಯಲ್ಲಿ ಗುರುವಾರ ಗೌರಮ್ಮ (55) ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗೌರಮ್ಮ ಅವರ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗೌರಮ್ಮ ಮತ್ತು ಆಕೆಯ ಮಗ ಇಬ್ಬರೇ ತೋಟದ ಮನೆಯಲ್ಲಿ ವಾಸವಿದ್ದರು. ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದ ಮಗ, ಮಧ್ಯಾಹ್ನ ತಾಯಿಯ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದನ್ನು ಕಂಡು ಗಾಬರಿಗೊಂಡಿದ್ದರು. ತಕ್ಷಣ ಮನೆಗೆ ಮರಳಿದಾಗ ಗೌರಮ್ಮ ಮೃತಪಟ್ಟಿರುವುದು ತಿಳಿದುಬಂದಿದೆ.
ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಜಮೀನು ವಿಚಾರವಾಗಿ ನಮಗೂ ಮತ್ತು ನಮ್ಮ ದೊಡ್ಡಪ್ಪ ಅವರಿಗೂ ಆಗ್ಗಾಗ್ಗೆ ಜಗಳ ನಡೆಯುತ್ತಿತ್ತು. ಈ ಘಟನೆಗೂ ಅವರಿಗೂ ಸಂಬಂಧವಿದೆ’ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.