
ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು.
ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 60 ವರ್ಷ ಯಶಸ್ವಿಯಾಗಿ ಮುಂದುವರಿದಿದೆ. ಇದರ ಪ್ರಯುಕ್ತ 8 ಅಡಿ ಎತ್ತರದ ಪುತ್ಥಳಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ ವತಿಯಿಂದ ₹1 ಕೋಟಿ ವೆಚ್ಚ ಮಾಡಲಾಗುತ್ತಿದೆ.
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೂಜೆ ನೆರವೇರಿಸಿ ಮಾತನಾಡಿ, ‘ಪುತ್ಥಳಿ ಜತೆಗೆ ವಿಶೇಷವಾಗಿ ಉದ್ಯಾನವನ ನಿರ್ಮಿಸಲಾಗುತ್ತದೆ. ಇದಕ್ಕೆ ಮಠದ ಹಳೇ ವಿದ್ಯಾರ್ಥಿಗಳು ಸಹ ಕೈಜೋಡಿಸಿದ್ದಾರೆ’ ಎಂದರು.
‘ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹10 ಲಕ್ಷ ನೀಡಲಾಗುವುದು’ ಎಂದು ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಭರವಸೆ ನೀಡಿದರು.
ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ವಸ್ತು ಪ್ರದರ್ಶನದ ಕಾರ್ಯದರ್ಶಿ ಜಿ.ಗಂಗಾಧರಯ್ಯ, ಜಂಟಿ ಕಾರ್ಯದರ್ಶಿಗಳಾದ ಕೆಂ.ಬ.ರೇಣುಕಯ್ಯ, ಎಸ್.ಶಿವಕುಮಾರ್, ಸಿದ್ಧಗಂಗಾ ವಿದ್ಯಾಸಂಸ್ಥೆ ನಿರ್ದೇಶಕ ಜಯವಿಭವಸ್ವಾಮಿ, ಎಸ್‌ಐಟಿ ಸಿಇಒ ಶಿವಕುಮಾರಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಪತ್ರಕರ್ತ ಎಸ್.ನಾಗಣ್ಣ, ಮಠದ ಹಳೇ ವಿದ್ಯಾರ್ಥಿ ವೆಂಕಟೇಗೌಡ ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.