ADVERTISEMENT

ತೆರಿಗೆ ರಿಯಾಯಿತಿ: ಜುಲೈ 31ರ ವರೆಗೆ ವಿಸ್ತರಣೆ

ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿ ಇರುವ ಜನರಿಗೆ ಪಾಲಿಕೆಯಿಂದ ಮತ್ತೊಂದು ಅವಕಾಶ

​ಪ್ರಜಾವಾಣಿ ವಾರ್ತೆ
Published 28 ಮೇ 2020, 17:32 IST
Last Updated 28 ಮೇ 2020, 17:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ 5ರ ರಿಯಾಯಿತಿ ಕಾಲಾವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಮೇಯರ್ ಫರೀದಾಬೇಗಂ ಗುರುವಾರ ತಿಳಿಸಿದರು.

ಇಂತಹ ಸಂಕಷ್ಟದ ದಿನಗಳಲ್ಲಿ ವೈಯಕ್ತಿಕ ಆದಾಯವಿಲ್ಲದೆ ಸಂಕಷ್ಟದಲ್ಲಿ ಇರುವವರು ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆ ಪಾವತಿಸಲು ಆಗದಿರಬಹುದು. ಹಾಗಾಗಿ ಸರ್ಕಾರಕ್ಕೆ ಮನವಿ ಮಾಡಿಕೊಂಡು, ಕಾಲಾವಧಿ ವಿಸ್ತರಣೆ ಮಾಡಲಾಗಿದೆ. ನಾಗರಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದುಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರತಿ 3 ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಶೇ 15ರಷ್ಟು ಹೆಚ್ಚಿಸಲು ಸರ್ಕಾರದ ಆದೇಶವಿದೆ. ಈ ಬಾರಿ ತೆರಿಗೆ ಏರಿಕೆಯನ್ನು ಕೈಬಿಡಬೇಕೆಂದು ಪಾಲಿಕೆಯ ಎಲ್ಲ ಸದಸ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ಬೇರೆ ರಾಜ್ಯಗಳಿಂದ ಬರುತ್ತಿರುವವರಿಂದ ಬಹುಬೇಗ ಕೊರೊನಾ ಸೋಂಕು ಹರಡುತ್ತಿದೆ. ಕಣ್ಣುತಪ್ಪಿಸಿ ನಗರಕ್ಕೆ ಬರುವವರ ಬಗ್ಗೆ ನಾಗರಿಕರು ಪಾಲಿಕೆಗೆ ಮಾಹಿತಿ ನೀಡಿ ಸಹಕರಿಸಬೇಕು. ಹೊರ ರಾಜ್ಯಗಳಿಂದ ಬಂದವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ತುಮಕೂರನ್ನು ಕೊರೊನಾ ಮುಕ್ತ ನಗರವನ್ನಾಗಿ ಮಾಡುವ ಹೊಣೆ ನಮ್ಮೆಲ್ಲರ ಮೇಲಿದೆ. ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.