ADVERTISEMENT

121 ಚೆಕ್ ಡ್ಯಾಂ ನಿರ್ಮಾಣ: ಶಾಸಕ‌ ಟಿ.ಬಿ.ಜಯಚಂದ್ರ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 6:54 IST
Last Updated 23 ನವೆಂಬರ್ 2025, 6:54 IST
ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಗುಂಡಆಂಜನೇಯ ದೇವಸ್ಥಾನದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಜಲಾನಯನ ಮಹೋತ್ಸವವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು
ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಗುಂಡಆಂಜನೇಯ ದೇವಸ್ಥಾನದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಜಲಾನಯನ ಮಹೋತ್ಸವವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು   

ಶಿರಾ: ನೀರು ಹರಿದುಹೋಗಲು ಬಿಡದೆ ಅದನ್ನು ಭೂಮಿಯಲ್ಲಿ ಇಂಗಿಸಿ ಅಂತರ್ಜಲವನ್ನು ಹೆಚ್ಚಿಸುವ ದೃಷ್ಟಿಯಿಂದ ತಾಲ್ಲೂಕಿನಲ್ಲಿ 121 ಚೆಕ್ ಡ್ಯಾಂ ನಿರ್ಮಾಣ ಮಾಡಿರುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಗೌಡಗೆರೆ ಹೋಬಳಿಯ ಗುಂಡಆಂಜನೇಯ (ಗುನ್ನಯ್ಯನ ಗುಡಿ) ದೇವಸ್ಥಾನದ ಆವರಣದಲ್ಲಿ ಶನಿವಾರ ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಜಲಾನಯನ (ವಾಟರ್ ಶೆಡ್) ಮಹೋತ್ಸವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಅಂತರ್ಜಲಮಟ್ಟ ಹೆಚ್ಚಿಸಲು ಜಲಾನಯನ ಯೋಜನೆ ಉತ್ತಮವಾಗಿದೆ. ಹಿಂದೆ ಕೃಷಿ ಸಚಿವನಾಗಿದ್ದ ಸಮಯದಲ್ಲಿ ಜಲಾನಯನ ಇಲಾಖೆಯನ್ನು ಪ್ರಾರಂಭಿಸಿ ನೀರಾವರಿಗೆ ಆದ್ಯತೆ ನೀಡಲಾಯಿತು. ಕೇಂದ್ರ ಸರ್ಕಾರ ಇದನ್ನು ಸುಜಲಾ ಹೆಸರಿನಲ್ಲಿ ಜಾರಿಗೊಳಿಸಿತು ಎಂದರು.

ADVERTISEMENT

ಮಣ್ಣು ಮತ್ತು ನೀರಿನ ಸಂರಕ್ಷಣೆಯ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಚಂಗಾವರ, ಬೇವಿನಹಳ್ಳಿ ಮತ್ತು ಹೊಸೂರು ಗ್ರಾ.ಪಂ ವ್ಯಾಪ್ತಿಯ 17 ಸರ್ಕಾರಿ ಶಾಲೆಗಳಿಗೆ 117 ಡೆಸ್ಕ್ ಹಾಗೂ ರೈತರಿಗೆ ಜೇನುಪೆಟ್ಟಿಗೆ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಜಲಾನಯನ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕಿನ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲೆಯ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಕೃಷಿ ಸಮಾಜ ಅಧ್ಯಕ್ಷ ಮಂಜುನಾಥ್, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಎಸ್.ಕಳೆನ್ನವರ, ಉಪ ನಿರ್ದೇಶಕ ಎಚ್.ಹುಲಿರಾಜು, ಎಚ್.ಎಲ್.ಚಂದ್ರಕುಮಾರ್, ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹಮ್ಮದ್ ಪರವೇಜ ಬಂಥನಾಳ, ರೈತ ಸಂಘದ ಪ್ರಧಾನ‌ ಕಾರ್ಯದರ್ಶಿ ನಾದೂರು ಕೆಂಚಪ್ಪ, ಶಾರದಮ್ಮ, ಲಕ್ಕಣ್ಣ, ಸುಜಾತ‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.