ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಎಸ್.ಬಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಶೀರ್ಷಿಕೆ ಅಡಿಯಲ್ಲಿ ತಾಲ್ಲೂಕಿನ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತುಮಕೂರಿನ ಮೊಹಮ್ಮದ್ ಮಸ್ತೂರ್ ಅದಿಲ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲ್ಲೂಕಿನಲ್ಲಿ 44 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕ ಗಳಿಸಿದ್ದವರು ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜ್ ಹಾಗೂ ಶಿಕ್ಷಕ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು.
ಶಾಸಕ ಸುರೇಶ್ ಬಾಬು, ರವಿಕುಮಾರ್, ಸುನಿಲ್, ಪೋಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.