ADVERTISEMENT

ಇಂದು ಶಿಕ್ಷಕರಿಂದ ತರಗತಿ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 16:14 IST
Last Updated 30 ಜೂನ್ 2019, 16:14 IST

ತುಮಕೂರು: ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ ಪದವೀಧರ ಪ್ರಾಥಮಿಕ ಶಿಕ್ಷಕರನ್ನು 6ರಿಂದ 8ನೇ ತರಗತಿ ವರೆಗಿನ ಬೋಧನಾ ವೃಂದಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಹಿತರಕ್ಷಣಾ ಸಮಿತಿ ಜುಲೈ 1ರಿಂದ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.

ರಾಜ್ಯದಲ್ಲಿ 82,000 ಶಿಕ್ಷಕರು ಉನ್ನತ ಪದವಿ ಪಡೆದಿದ್ದಾರೆ. 14 ವರ್ಷಗಳಿಂದ ಅವರು 6ರಿಂದ 8ನೇ ತರಗತಿ ವರೆಗೆ ವಿಷಯವಾರು ಪಠ್ಯಬೋಧನೆ ಮಾಡುತ್ತಿದ್ದಾರೆ. ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ(1ರಿಂದ 5ನೇ ತರಗತಿ) ವೃಂದಕ್ಕೆ ಸೇರಿಸಲಾಗಿದೆ. ಇದರಿಂದ ಹಿಂಬಡ್ತಿ ನೀಡಿದಂತಾಗುತ್ತದೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಹತೆ ಮತ್ತು ಬೋಧನಾ ಅನುಭವ ಇರುವ ಶಿಕ್ಷಕರನ್ನು ಹಿರಿಯ ಪ್ರಾಥಮಿಕ ಶಾಲಾ ವೃಂದಕ್ಕೆ(6ರಿಂದ 8ನೇ ತರಗತಿ) ಸೇರ್ಪಡೆ ಮಾಡಬೇಕು. ಇದಕ್ಕಾಗಿ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಮಿತಿ ಅಧ್ಯಕ್ಷ ವಿ.ಮಹದೇವಯ್ಯ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.