ADVERTISEMENT

ಗುಬ್ಬಿ: ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ನಿಧನ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2025, 14:24 IST
Last Updated 14 ಏಪ್ರಿಲ್ 2025, 14:24 IST
ಲೋಕೇಶ್ ರಾವ್
ಲೋಕೇಶ್ ರಾವ್   

ಗುಬ್ಬಿ: ತಾಲ್ಲೂಕಿನ ಬ್ಯಾಡಗೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಿಟ್ಟೂರು ಗ್ರಾಮದ ಲೋಕೇಶ್ ರಾವ್ (35) ವಿದ್ಯುತ್ ಸ್ಪರ್ಶಿಸಿ ಸೋಮವಾರ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ಮನೆ ಸಮೀಪದ ಬೀದಿದೀಪ ಆರಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ಬೀದಿ ದೀಪಗಳಿಗೆ ಅಳವಡಿಸಿರುವ ವೈರ್‌ಗೆ ಸ್ವಿಚ್ ಹಾಕುವಂತೆ ಅನೇಕ ಬಾರಿ ಸಂಬಂಧಿಸಿದ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಸ್ವಿಚ್ ಅಳವಡಿಸುವುದಕ್ಕೆ ಬದಲಾಗಿ ವೈರನ್ನೇ ಒಂದಕ್ಕೊಂದು ಸ್ಪರ್ಶಿಸಿ ಇಟ್ಟಿರುವುದೇ ಅನಾಹುತಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಮೃತರು ಪತ್ನಿ, ಎರಡು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಮಗುವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸೋಮವಾರ ಸಂಜೆ ಗ್ರಾಮದಲ್ಲಿ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.