ADVERTISEMENT

ತುಮಕೂರು | ಅಧ್ಯಾಪಕರು ಪ್ರಾಮಾಣಿಕರಾಗಬೇಕು: ಪ್ರೊ.ಎಂ.ಜಯಕರ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:54 IST
Last Updated 6 ಸೆಪ್ಟೆಂಬರ್ 2025, 4:54 IST
ತುಮಕೂರು ವಿ.ವಿ.ಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬೆಂಗಳೂರು ವಿ.ವಿ ಕುಲಪತಿ ಪ್ರೊ.ಎಂ.ಜಯಕರ ಶೆಟ್ಟಿ, ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ಪ್ರೊ.ಎಂ.ಕೊಟ್ರೇಶ್, ಪ್ರೊ.ಎನ್.ಸತೀಶ್‌ಗೌಡ ಇತರರು ಉಪಸ್ಥಿತರಿದ್ದರು

ತುಮಕೂರು: ವ್ಯಕ್ತಿತ್ವ ಮತ್ತು ರಾಷ್ಟ್ರ ನಿರ್ಮಾಣ ಅಧ್ಯಾಪಕರ ಹೊಣೆ. ಅವರು ಕರ್ತವ್ಯದಲ್ಲಿ ಪ್ರಾಮಾಣಿಕತೆ ಮೆರೆಯದೆ ಹೋದರೆ ವಿದ್ಯಾರ್ಥಿಗಳಲ್ಲಿ ಅದನ್ನು ಅಪೇಕ್ಷಿಸಲಾಗದು ಎಂದು ಬೆಂಗಳೂರು ವಿ.ವಿ ಕುಲಪತಿ ಪ್ರೊ.ಎಂ.ಜಯಕರ ಶೆಟ್ಟಿ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಾಪಕರು ತಮ್ಮ ನಡೆ, ನುಡಿಗಳಿಂದ ವಿದ್ಯಾರ್ಥಿಗಳನ್ನು ಪ್ರಭಾವಿಸಬೇಕು. ಶಿಕ್ಷಕರು ಮೌಲ್ಯಗಳ ಸಂರಕ್ಷಕರಾಗಿ ಪ್ರಸಿದ್ಧರು. ಸಮಾಜದಲ್ಲಿ ಮೌಲ್ಯಗಳು ಉಳಿಯಬೇಕಾದರೆ ಅದು ಶಿಕ್ಷಕರ ವ್ಯಕ್ತಿತ್ವದಲ್ಲಿ ಪ್ರತಿಫಲನಗೊಳ್ಳಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ADVERTISEMENT

ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ನೋಡುವ ವಿಶಾಲ ದೃಷ್ಟಿಕೋನ, ಮನೋಭಾವ ಹೊಂದಿರಬೇಕು. ಆರೋಗ್ಯ, ವಿಜ್ಞಾನ, ಸಂಶೋಧನೆ ಎಲ್ಲ ರಂಗಗಳಲ್ಲೂ ಭಾರತ ಅಸಾಮಾನ್ಯ ಸಾಧನೆ ಮಾಡುತ್ತಿದೆ. ಇದಕ್ಕೆ ಪೂರಕವಾದ ಮಾನವ ಸಂಪನ್ಮೂಲ ಸಿದ್ಧಪಡಿಸುವ ಜವಾಬ್ದಾರಿ ಅಧ್ಯಾಪಕರ ಮೇಲಿದೆ ಎಂದು ಹೇಳಿದರು.

ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಕುಲಸಚಿವರಾದ ಪ್ರೊ.ಎಂ.ಕೊಟ್ರೇಶ್, ಪ್ರೊ.ಎನ್.ಸತೀಶ್‌ಗೌಡ, ಕಾರ್ಯಕ್ರಮ ಸಂಯೋಜಕ ಎ.ಎಂ.ಮಂಜುನಾಥ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.