ADVERTISEMENT

ಪರಿಸರ ಸ್ನೇಹಿ ಜೀವನಶೈಲಿ ಅಗತ್ಯ: ಶಿಕ್ಷಕ ಶಿವಣ್ಣ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 7:08 IST
Last Updated 12 ಜನವರಿ 2026, 7:08 IST
ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಹವಾಗುಣ ಬದಲಾವಣೆ ಮತ್ತು ಜೀವನಶೈಲಿ ಕಾರ್ಯಕ್ರಮದಲ್ಲಿ ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿದರು
ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಹವಾಗುಣ ಬದಲಾವಣೆ ಮತ್ತು ಜೀವನಶೈಲಿ ಕಾರ್ಯಕ್ರಮದಲ್ಲಿ ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿದರು   

ಶಿರಾ: ಮಾನವ ಕೇಂದ್ರಿತ ಅಭಿವೃದ್ಧಿ ಯೋಜನೆಗಳಿಂದ ಜೀವ ವೈವಿಧ್ಯತೆಗೆ ಧಕ್ಕೆ ಉಂಟಾಗುತ್ತಿದೆ. ಇದರಿಂದ ಜೀವ ಸಂಕುಲ ಅವನತಿಯತ್ತ ಸಾಗುತ್ತಿದೆ. ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಸಮತೋಲನವಾಗಿ ನಡೆಯಬೇಕು ಎಂದು ಮುಖ್ಯ ಶಿಕ್ಷಕ ಶಿವಣ್ಣ ಹೇಳಿದರು.

ತಾಲ್ಲೂಕಿನ ಬ್ರಹ್ಮಸಂದ್ರ ಸರ್ಕಾರಿ ಪ್ರೌಢಶಾಲೆ ಧನ್ವಂತರಿ ಇಕೋ ಕ್ಲಬ್ ಮತ್ತು ಅಮಲಗೊಂದಿ ಚಿಗುರು ಯುವಜನ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಹವಾಗುಣ ಬದಲಾವಣೆ ಮತ್ತು ಜೀವನಶೈಲಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯನ ಆಧುನಿಕ ಜೀವನಶೈಲಿಯು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ ಎಂದರು.

ADVERTISEMENT

ಚಿಗುರು ಯುವಜನ ಸಂಘದ ಅಧ್ಯಕ್ಷ ಮಂಜುನಾಥ್ ಅಮಲಗೊಂದಿ ಮಾತನಾಡಿ, ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ಇದರಿಂದ ಭೂಮಿ ಮೇಲೆ ಪರಿಣಾಮ ಬೀರುತ್ತಿದೆ. ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳದಿದ್ದರೆ ಎಲ್ಲರಿಗೂ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಶಿಕ್ಷಕ ಗೋವಿಂದರಾಜು, ಧನ್ವಂತರಿ ಇಕೋಕ್ಲಬ್ ಕಾರ್ಯದರ್ಶಿ ಪ್ರತಿಭಾ, ಯಶೋಧ ಸಿ.ಜೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.