ADVERTISEMENT

ತೋವಿನಕೆರೆ: ನೇಣು ಬಿಗಿದುಕೊಂಡು ಶಿಕ್ಷಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 10:04 IST
Last Updated 9 ಡಿಸೆಂಬರ್ 2025, 10:04 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ತೋವಿನಕೆರೆ: ಕೊರಟಗೆರೆ ತಾಲ್ಲೂಕು ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ದೇವರಾಜು (56) ಎಂಬುವರು ಸೋಮವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆ ವಿದ್ಯಾರ್ಥಿನಿ ಜತೆಗೆ ದೇವರಾಜು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಕೆಲವು ಹಿರಿಯರು ಸೇರಿಕೊಂಡು ವಿದ್ಯಾರ್ಥಿನಿ ಕುಟುಂಬದವರ ಜತೆಗೆ ರಾಜಿ ಸಂಧಾನ ನಡೆಸಿದ್ದರು.

ADVERTISEMENT

ಇದರ ನಡುವೆ ಕೆಲವು ಮಧ್ಯವರ್ತಿಗಳು, ಯೂಟೂಬ್ ಪತ್ರಕರ್ತರು ಎಂದು ಹೇಳಿಕೊಂಡವರು ಹಣಕ್ಕಾಗಿ ಪೀಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.