
ತುಮಕೂರು: ಮಕ್ಕಳಿಗೆ ಕನ್ನಡದ ಪರಂಪರೆ ತಿಳಿಸಬೇಕು. ಶಾಲಾ–ಕಾಲೇಜುಗಳಲ್ಲಿ ಕನ್ನಡಕ್ಕೆ ಪ್ರಾಶಸ್ತ್ಯ ನೀಡಬೇಕು ಎಂದು ಮಹಿಳಾ ಸಮಾಜದ ಅಧ್ಯಕ್ಷೆ ಉಷಾ ಅನಂತರಾಮಯ್ಯ ಸಲಹೆ ಮಾಡಿದರು.
ನಗರದಲ್ಲಿ ಈಚೆಗೆ ಮಹಿಳಾ ಸಮಾಜದಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಅಸ್ತಿತ್ವವನ್ನು ಕ್ರಿಸ್ತ ಪೂರ್ವದ ಕಾಲದಿಂದಲೂ ಕಾಣಬಹುದು. ಶ್ರೀಮಂತ ಸಾಹಿತ್ಯ ಪರಂಪರೆ ಹೊಂದಿದೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು. ಪರಭಾಷಾ ವ್ಯಾಮೋಹಕ್ಕೆ ಒಳಗಾಗದೆ ಕನ್ನಡ ಭಾಷೆ ಬೆಳೆಸಬೇಕು ಎಂದರು.
ಮಹಿಳಾ ಸಮಾಜದ ಸದಸ್ಯೆ ಸರಸ್ವತಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಸಮಾಜ ಟ್ರಸ್ಟ್ ಅಧ್ಯಕ್ಷೆ ಟಿ.ಎಸ್.ಶೀಲವತಿ, ಪದಾಧಿಕಾರಿಗಳಾದ ಸುಭಾಷಿಣಿ ರವೀಶ್, ಶುಭಾ ರಮೇಶ್, ಉಷಾ ಮಂಜುನಾಥ್, ಮಂಜುಳಾ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.