ಕುಣಿಗಲ್: ಎಡೆಯೂರು ಸಿದ್ದಲಿಂಗೇಶ್ವರ ರಥೋತ್ಸವ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ರಥೋತ್ಸವದ ಅಂಗವಾಗಿ ಬೆಳಗ್ಗೆ ಗದ್ದುಗೆಗೆ ವಿಶೇಷ ಅಲಂಕಾರ, ಪೂಜೆಗಳು ನಡೆದು ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಾಚಾರ್ಯ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ, ಅಂಕನಹಳ್ಳಿಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ ನಂದಿಧ್ವಜ ಪೂಜೆಯ ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.
ಬಿಸಿಲನ ಝಳ ಹೆಚ್ಚಾಗಿದ್ದರೂ, ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಭಕ್ತರು ರಥವನ್ನೆಳೆದು, ಬಾಳೆಹಣ್ಣು, ದವನ, ಕರಿಮೆಣಸುಗಳನ್ನು ರಥಕ್ಕೆ ತೂರಿ ಸಂಭ್ರಮಿಸಿದರು.
ತಹಶೀಲ್ದಾರ್ ವಿಶ್ವನಾಥ್, ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಪ್ಪ, ಅಧೀಕ್ಷಕಿ ಲಲಿತಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.