ADVERTISEMENT

ಬಸ್‌ಗೆ ಟೆಂಪೊ ಡಿಕ್ಕಿ: ಇಬ್ಬರು ಸಾವು, ನಾಲ್ಕು ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಮೇ 2023, 3:57 IST
Last Updated 25 ಮೇ 2023, 3:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕುಣಿಗಲ್: ಟೆಂಪೊ ಟ್ರಾವಲರ್ ವಾಹನ ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಡಿ.ಹೊಸಹಳ್ಳಿ ಬಳಿ ಗುರುವಾರ ನಡೆದಿದೆ.

ಮೃತರನ್ನು ಸಿಂಧನೂರು ಪಟ್ಟಣದ ಶಶಿಕಲಾ (69) ಮತ್ತು ಟಿಟಿ ಚಾಲಕ ವೀರೇಶ್ (35)ಎಂದು ಗುರುತಿಸಲಾಗಿದೆ, ಸಿಂಧನೂರು ನಿಂದ ಮೈಸೂರಿಗೆ ಪ್ರವಾಸಕ್ಕಾಗಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT