ADVERTISEMENT

15ರಿಂದ ವಿ.ವಿ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 5:09 IST
Last Updated 13 ಏಪ್ರಿಲ್ 2021, 5:09 IST

ತುಮಕೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಮುಂದೂಡಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಏ. 15ರಿಂದ ನಿಗದಿಯಂತೆ ನಡೆಯಲಿವೆ ಎಂದು ತುಮಕೂರು ವಿಶ್ವವಿದ್ಯಾಲಯ ತಿಳಿಸಿದೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿ ಏ. 8ರಂದು ಆದೇಶಿಸಲಾಗಿತ್ತು. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯುಂಟಾಗುತ್ತದೆ.

ಹಾಗಾಗಿ ಖಾಸಗಿ ಸಾರಿಗೆ ವಾಹನಗಳನ್ನು ಬಳಸಿಕೊಂಡು ಪರೀಕ್ಷೆಗಳಿಗೆ ಹಾಜರಾಗುವಂತೆ ವಿ.ವಿ ಪರೀಕ್ಷಾಂಗ ಕುಲಸಚಿವರು ಸಲಹೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.