ADVERTISEMENT

ರೈತರ ಅಭಿವೃದ್ಧಿಯೇ ಸಹಕಾರ ಸಂಘದ ಧ್ಯೇಯ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:11 IST
Last Updated 28 ಸೆಪ್ಟೆಂಬರ್ 2022, 5:11 IST
ಗುಬ್ಬಿ ತಾಲ್ಲೂಕಿನ ಹಂಡನಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು
ಗುಬ್ಬಿ ತಾಲ್ಲೂಕಿನ ಹಂಡನಹಳ್ಳಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು   

ಗುಬ್ಬಿ: ‘ಕೃಷಿ ಪತ್ತಿನ ಸಹಕಾರ ಸಂಘಗಳು ರೈತ ಪರವಾಗಿದ್ದು ಅವರ ಅಭಿವೃದ್ಧಿಯನ್ನೇ ಧ್ಯೇಯವಾಗಿಸಿಕೊಂಡಿವೆ’ ಎಂದು ಹಂಡನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ತಿಳಿಸಿದರು.

ಸಂಘದ ಆವರಣದಲ್ಲಿ ಏರ್ಪಡಿಸಿದ್ದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ರೈತರು ಹಾಗೂ ಷೇರುದಾರರು ಸಾಲ ಮರುಪಾವತಿಯಲ್ಲಿ ಪ್ರಾಮಾಣಿಕ ವಾಗಿದ್ದರೆ ಸಂಘವು ಇನ್ನೂ ಹೆಚ್ಚಿನ ಸೇವೆ ಒದಗಿಸಲು ಸಾಧ್ಯವಾಗುತ್ತದೆ ಎಂದರು.

ADVERTISEMENT

ರೈತರಿಗಾಗಿಯೇ ಸ್ಥಾಪನೆ ಗೊಂಡಿರುವ ಕೃಷಿ ಸಹಕಾರ ಸಂಘಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಘದ ಉಪಾಧ್ಯಕ್ಷ ರಾಮಯ್ಯ ಮಾತನಾಡಿ, ಸಂಘದಲ್ಲಿ ಇರುವವರೆಲ್ಲರೂ ಸ್ಥಳೀಯರೇ ಆಗಿದ್ದಾರೆ. ಹಾಗಾಗಿ, ಸ್ಥಳೀಯ ಸಮಸ್ಯೆಗಳನ್ನು ಅರಿತು ಸ್ಪಂದಿಸಲು ಸಾಧ್ಯವಾಗುತ್ತದೆ. ಸಂಘದ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲಾ ಸಹಕಾರವನ್ನು ಷೇರುದಾರರಿಗೆ ಒದಗಿಸಲು ಸಂಘ ಬದ್ಧವಾಗಿದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕ ಬಿ.ಎಸ್. ರಮೇಶ್ ಮಾತನಾಡಿ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ತಾಲ್ಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯ ಪಡೆದು ಸಂಘವನ್ನು ಗಣಕೀಕರಣಗೊಳಿಸಿ ಉನ್ನತದರ್ಜೆಗೇರಿಸುವ ಯೋಜನೆ ಇದೆ. ಸಂಘದ ಎಲ್ಲಾ ನಿರ್ದೇಶಕರು ಹಾಗೂ ಸದಸ್ಯರು ಉತ್ತಮ ರೀತಿಯಲ್ಲಿ ಸಹಕರಿಸಿದರೆ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಗದೀಶಯ್ಯ, ಸಂಘದ ನಿರ್ದೇಶಕರು, ಷೇರುದಾರರು, ಸಂಘದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.