ADVERTISEMENT

ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಚಿತ್ರವೇ ಇಲ್ಲ; ಜಾಲತಾಣದಲ್ಲಿ ಟೀಕೆ

ಕಾಂಗ್ರೆಸ್‌ನಿಂದ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಪುಷ್ಪ ನಮನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 5:37 IST
Last Updated 3 ಅಕ್ಟೋಬರ್ 2020, 5:37 IST
ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪುಷ್ಪ ನಮನ ಕಾರ್ಯಕ್ರಮದ ಫ್ಲೆಕ್ಸ್‌
ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪುಷ್ಪ ನಮನ ಕಾರ್ಯಕ್ರಮದ ಫ್ಲೆಕ್ಸ್‌   
""

ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪುಷ್ಪ ನಮನ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಗಾಂಧಿ ಅವರ ಮತ್ತು ಶಾಸ್ತ್ರಿ ಅವರ ಭಾವಚಿತ್ರಗಳೇ ಇಲ್ಲ! ಈ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿದೆ.

ಹಲವರು ಈ ಫ್ಲೆಕ್ಸ್ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿ ಕಾಂಗ್ರೆಸ್ ಪಕ್ಷದ ನಡೆಗೆ ವ್ಯಂಗ್ಯವಾಡಿದ್ದಾರೆ. ಈ ಫ್ಲೆಕ್ಸ್ ಟ್ರೋಲ್‌ಗೂ ಗುರಿಯಾಗಿದೆ.

ಈ ಫ್ಲೆಕ್ಸ್‌ನಲ್ಲಿ ಗಾಂಧಿ ಮತ್ತು ಶಾಸ್ತ್ರಿ ಅವರ ಭಾವಚಿತ್ರ ಹುಡುಕಿಕೊಟ್ಟವರಿಗೆ ಬಹುಮಾನ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ.

ADVERTISEMENT
ಟ್ರೋಲ್‌ಗೊಳಗಾದ ಫ್ಲೆಕ್ಸ್

ಫ್ಲೆಕ್ಸ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಾಸಲು ಸತೀಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಿತ್ರಗಳೇ ಎದ್ದು ಕಾಣುತ್ತವೆ. ಸಾಸಲು ಸತೀಶ್ ಕಾರ್ಯಾಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.