ADVERTISEMENT

ತುಮಕೂರು | ಕಚೇರಿಗೆ ಬಾರದ ಅಧಿಕಾರಿ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 2:10 IST
Last Updated 2 ಜೂನ್ 2020, 2:10 IST
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಗೋವಿಂದೆಗೌಡ.ವಿ. ಭಾವಚಿತ್ರ.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಗೋವಿಂದೆಗೌಡ.ವಿ. ಭಾವಚಿತ್ರ.   

ತಿಪಟೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರುಹಾಜರಾಗಿದ್ದ ಅಧಿಕಾರಿಯನ್ನು ಅಮಾನತು ಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ಸಚಿವರು ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ತಾಲ್ಲೂಕಿನ ಬಿದರೆಗುಡಿ ಕಾವಲ್ ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಆಗ ಕೇಂದ್ರದ ಮುಖ್ಯಸ್ಥ ಡಾ.ವಿ.ಗೋವಿಂದೇಗೌಡ ಬೆಂಗಳೂರಿನ ಮುಖ್ಯ ಕಚೇರಿಗೆ ಭೇಟಿ ನೀಡಿರುವುದಾಗಿ ಕೇಂದ್ರದ ಸಿಬ್ಬಂದಿಯೊಬ್ಬರು ಸಚಿವರಿಗೆ ತಿಳಿಸಿದ್ದಾರೆ.

ಕಚೇರಿಯಲ್ಲಿದ್ದ ಹಾಜರಾತಿ ಪುಸ್ತಕ, ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಎಲ್ಲ ದಾಖಲೆಗಳು ಅಸ್ಪಷ್ಟ ವಾಗಿದ್ದವು. ಅತಿ ಹೆಚ್ಚು ಗೈರುಹಾಜರಿ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಹಾಗೂ ನ್ಯಾಷನಲ್ ಸೀಡ್ಸ್ ಪ್ರಾಜೆಕ್ಟ್ ಮುಖ್ಯಸ್ಥರನ್ನು ದೂರವಾಣಿ ಮೂಲಕ ವಿಚಾರಿಸಿದರು. ಆಗ ಬೆಂಗಳೂರಿನ ಕಚೇರಿಗೆ ಹೋಗದೆ ಇರುವ ಮಾಹಿತಿ ಲಭ್ಯವಾಗಿದೆ.

ADVERTISEMENT

ಕೂಡಲೇ ಅಮಾನತು ಮಾಡುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.